ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 27 ಜನವರಿ 2022
ಗಾಜನೂರು ರಸ್ತೆಯ ಮೀನು ಹೊಟೇಲ್’ಗಳಲ್ಲಿ ಮದ್ಯ ಸೇವನೆಗೆ ಅವಕಾಶ ಕಲ್ಪಿಸಲಾಗುತ್ತಿದೆ. ಇಂತಹ ಹೊಟೇಲ್’ಗಳ ಮಾಲೀಕರ ವಿರುದ್ದ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೆ ಇಲ್ಲಿ ಮದ್ಯ ಸೇವನೆ ಮಾಡಿವ ವಾಹನ ಚಾಲನೆ ಮಾಡುವ ಪ್ರಕರಣಗಳು ಹೆಚ್ಚಿವೆ. ಅಂತಹವರ ವಿರುದ್ಧ ದಂಡ ವಿಧಿಸಲಾಗುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮಿ ಪ್ರಸಾದ್ ತಿಳಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ಪ್ರೆಸ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್, ಗಾಜನೂರು ರಸ್ತೆಯ ಮೀನು ಹೊಟೇಲ್’ಗಳಲ್ಲಿ ಮದ್ಯ ಸೇವನೆಗೆ ಅವಕಾಶ ಕಲ್ಪಿಸಲಾಗುತ್ತಿದೆ. ಇದು ಕಾನೂನು ಬಾಹಿರ ಎಂದು ಹೊಟೇಲ್ ಮಾಲೀಕರಿಗೆ ತಿಳಿಸಲಾಗಿದೆ. ಈಗಾಗಲೆ ಒಂದು ಪ್ರಕರಣವನ್ನು ದಾಖಲು ಮಾಡಿದ್ದೇವೆ. ಇದು ಮುಂದುವರೆಯದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಗಾಜನೂರಿನಲ್ಲಿ ಚೆಕ್ ಪೋಸ್ಟ್
ಇನ್ನು, ವೀಕೆಂಡ್ ಸಂದರ್ಭ ಮದ್ಯ ಸೇವನೆ ಮಾಡಿ ವಾಹನ ಚಾಲನೆ ಮಾಡುತ್ತಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಈ ಹಿನ್ನೆಲೆಯಲ್ಲಿ ಭಾನುವಾರದಂದು ಚೆಕ್ ಪೋಸ್ಟ್ ಸ್ಥಾಪನೆ ಮಾಡಿ, ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ಮದ್ಯ ಸೇವಿಸಿ ವಾಹನ ಚಲಾಯಿಸುವವರ ವಿರುದ್ಧ ದಂಡ ಹಾಕಲಾಗುತ್ತಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದರು.
ಹಳ್ಳಿ ಹಳ್ಳಿ ಮದ್ಯ ಮಾರಾಟಕ್ಕೆ ಬ್ರೇಕ್
ಇನ್ನು, ಅಕ್ರಮವಾಗಿ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಮುಂದಡಿ ಇಟ್ಟಿದೆ. ಹಳ್ಳಿ ಹಳ್ಳಿಯ ಗೂಡಂಗಡಿಗಳಲ್ಲಿ ಮದ್ಯ ಮಾರಾಟುವವರ ವಿರುದ್ಧ ಪ್ರಕರಣ ದಾಖಲು ಮಾಡಲಾಗುತ್ತಿದೆ.
‘ಹಳ್ಳಿ ಹಳ್ಳಿಯಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಇದನ್ನು ತಡೆಯುವ ಸಲುವಾಗಿ ಕ್ರಮ ಕೈಗೊಂಡಿದ್ದೇವೆ. ಒಂದು ವೇಳೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದು ಗೊತ್ತಾದರೆ ಮದ್ಯವನ್ನು ವಶಕ್ಕೆ ಪಡೆಯಲಾಗುತ್ತದೆ. ಅಲ್ಲದೆ ಮದ್ಯೆದ ಬಾಟಲಿ ಮೇಲೆ ಇರುವ ಬ್ಯಾಚ್ ನಂಬರ್ ಪರಶೀಲಿಸಿ ಸಂಬಂಧಪಟ್ಟ ವೈನ್ ಶಾಪ್ ಮಾಲೀಕರ ವಿರುದ್ಧವು ಕ್ರಮ ಜರುಗಿಸಲಾಗುತ್ತದೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದರು.
‘ಹಳ್ಳಿ ಹಳ್ಳಿಯಲ್ಲಿ ಅಕ್ರಮ ಮದ್ಯ ಮಾರಾಟ ತಡೆದರೆ ಅಪರಾಧ ಚಟುವಟಿಕೆ ತಗ್ಗಲಿದೆ’ ಎಂದು ಹೇಳಿದರು.