ಶಿವಮೊಗ್ಗದ ಲೈವ್.ಕಾಂ | SHIMOGA NEWS | 28 ಜನವರಿ 2022
ಬ್ಯಾಂಕ್ ಒಂದರಲ್ಲಿಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೆ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗದ ಗಾರ್ಡನ್ ಏರಿಯಾದ ಮೂರನೇ ಕ್ರಾಸ್’ನಲ್ಲಿರುವ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಿಟಕಿಗಳಿಂದ ದಟ್ಟ ಹೊಗೆ ಹೊರಗೆ ಬರುತ್ತಿದೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೆ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ದಾಖಲೆಗಳಿದ್ದ ಕೊಠಡಿಗೆ ಬೆಂಕಿ ತಗುಲಿದೆ. ಹಾಗಾಗಿ ದಾಖಲೆಗಳು ಸುಟ್ಟು ಹೋಗಿವೆ ಎಂದು ಹೇಳಲಾಗುತ್ತಿದೆ. ಸ್ಟ್ರಾಂಗ್ ರೂಮ್’ಗೆ ಯಾವುದೆ ತೊಂದರೆ ಉಂಟಾಗಿಲ್ಲ. ಆದ್ದರಿಂದ ಬ್ಯಾಂಕಿನಲ್ಲಿರುವ ಹಣಕ್ಕೆ ಸುರಕ್ಷಿತವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.