ಶಿವಮೊಗ್ಗ ಜಿಲ್ಲೆಯಲ್ಲಿ ಅಪಘಾತ ತಡೆಗೆ ಚಾರ್ಟ್ ಸಿದ್ಧ, ಪೊಲೀಸ್ ಇಲಾಖೆಯಿಂದ ರೆಡಿಯಾಗ್ತಿದೆ ಪ್ಲಾನ್

ಶಿವಮೊಗ್ಗದ ಲೈವ್.ಕಾಂ | SHIMOGA NEWS | 28 ಜನವರಿ 2022

ಶಿವಮೊಗ್ಗ ಜಿಲ್ಲೆಯಾದ್ಯಂತ ಅಪಘಾತಗಳ ಪ್ರಮಾಣ ಕಡಿತಗೊಳಿಸಲು ಪೊಲೀಸ್ ಇಲಾಖೆ ವಿನೂತನ ಪ್ರಯೋಗ ಆರಂಭಿಸಿದೆ. ಹೆಚ್ಚು ಅಪಘಾತ ಸಂಭವಿಸುವ ವಲಯಗಳ ಚಾರ್ಟ್ ಸಿದ್ಧಪಡಿಸಲಾಗಿದೆ.

AVvXsEjubsOilkhgq8SzYrg6f IdYVyFT33nAzTObPTO7g2mSz1bI1BgniDqmB4x0HK8nFq9AA8jkGiIzpjJBFT6QW sE542jUkz81YOwNkKrn9VhvNWib4U auKCyVAbPTmJGqoC1JFWnN355YeV 7vd8h okX5bUuHGgBqiG1kMPmUapD4rPa2q sp LbzqQ=s926

ಪ್ರೆಸ್ ಟ್ರಸ್ಟ್’ನಲ್ಲಿ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್, ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ರಕ್ಷಣಾಧಿಕಾರಿ ಹೇಳಿದ್ದೇನು?

♦ ‘ಕಳೆದ ಸಾಲಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಶೇ.20ರಷ್ಟು ಅಪಘಾತ ಪ್ರಕರಣಗಳು ಕಡಿಮೆಯಾಗಿವೆ. ಅಪಘಾತ ಪ್ರಮಾಣ ಇನ್ನಷ್ಟು ತಗ್ಗಬೇಕಿದೆ. ಇದಕ್ಕಾಗಿ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ.’

Kalleshwara-Enterprises.webp

♦ ‘ಒಂದು ಅಪಘಾತ ಹಲವು ಕುಟುಂಬದ ಮೇಲೆ ಪರಿಣಾಮ ಬೀರುತ್ತದೆ. ಪ್ರತ್ಯಕ್ಷ, ಪರೋಕ್ಷವಾಗಿ ಸುಮಾರು 30 ಜನಕ್ಕೆ ತೊಂದರೆ ಉಂಟಾಗುತ್ತದೆ.’

♦ ‘ಜಿಲ್ಲೆಯಾದ್ಯಂತ ಆಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ವಲಯಗಳನ್ನು ಗುರುತಿಸಲಾಗುತ್ತಿದೆ. ಯಾವೆಲ್ಲ ಜಾಗದಲ್ಲಿ ನಿರಂತರ ಅಪಘಾತ ಸಂಭವಿಸುತ್ತಿವೆ ಅನ್ನುವ ಚಾರ್ಟ್ ಸಿದ್ಧಪಡಿಸಲಾಗುತ್ತಿದೆ.’

♦ ‘ಜಿಲ್ಲಾಧಿಕಾರಿ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತದೆ. ಗುತ್ತಿಗೆದಾರರು, ಪೊಲೀಸ್ ಸಿಬ್ಬಂದಿ ಸೇರಿದಂತೆ ಪ್ರಮುಖರ ಜೊತೆ ಸಭೆ ನಡೆಸಲಾಗುತ್ತದೆ. ಅಪಘಾತ ತಡೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಇವುಗಳಿಂದ ಜಿಲ್ಲೆಯಲ್ಲಿ ಅಪಘಾತ ಪ್ರಮಾಣ ತಗ್ಗಲಿದೆ.’

ಇದನ್ನೂ ಓದಿ | ಶಿವಮೊಗ್ಗದಲ್ಲಿ ಬದಲಾಯ್ತು ಗಾಂಜಾ ಮಾರಾಟ ಕ್ರಮ, ಈಗ ಹೇಗೆ ನಡೆಯುತ್ತಿದೆ ದಂಧೆ?

ಇದನ್ನೂ ಓದಿ | ಗಾಜನೂರು ಸುತ್ತಮುತ್ತ ಪಾರ್ಟಿ ಮಾಡುವವರಿಗೆ ಕಾದಿದೆ ಶಾಕ್, ಖಡಕ್ ಕಾರ್ಯಾಚರಣೆಗೆ ರೆಡಿಯಾಗ್ತಿದೆ ಖಾಕಿ ಟೀಮ್

ಇದನ್ನೂ ಓದಿ | ‘ಜನರೊಂದಿಗೆ ಹೇಗೆ ವರ್ತಿಸಬೇಕು ಅನ್ನುವ ಕುರಿತು ಶಿವಮೊಗ್ಗ ಪೊಲೀಸರಿಗೆ ತರಬೇತಿ’

ABOUT NEW DEC 2021 REPORT

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment