ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | ಆಯನೂರು NEWS | 30 ಜನವರಿ 2022
ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು, ರಸ್ತೆ ಬದಿ ನಡೆದು ಹೋಗುತ್ತಿದ್ದ ಮೂವರು ಯುವಕರಿಗೆ ಗುದ್ದಿದೆ. ಆಯನೂರು ಬಳಿ ಶನಿವಾರ ಘಟನೆ ಸಂಭವಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಹಾರನಹಳ್ಳಿಯ ಅಲ್ಲಾಭಕ್ಷಿ, ರಾಹುಲ್ ಮತ್ತು ಕಿರಣ್ ಎಂಬುವವರು ಗಾಯಗೊಂಡಿದ್ದಾರೆ. ಅವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು.
ಮೂವರು ಯುವಕರು ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ಬಸ್ ಗುದ್ದುತ್ತಿದ್ದಂತೆ ಸ್ಥಳೀಯರು ಯುವಕರಿಗೆ ನೆರವಾಗಿದ್ದಾರೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.