ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 2 ಫೆಬ್ರವರಿ 2022
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾಗುವವರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಇವತ್ತು ನಾಲ್ವರು ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.
ಇವತ್ತು ನಾಲ್ಕು ಮಂದಿ ಸಾವನ್ನಪ್ಪಿರುವುದರಿಂದ ಈವರೆಗೂ ಕೊರೊನಾಗೆ ಬಲಿಯಾದವರ ಸಂಖ್ಯೆ 1094ಗೆ ಏರಿಕೆಯಾಗಿದೆ. ಇದು ಆತಂಕಕ್ಕೆ ಕಾರಣವಾಗಿದೆ.
500ಕ್ಕೂ ಹೆಚ್ಚು ಮಂದಿಗೆ ಪಾಸಿಟಿವ್
ಮತ್ತೊಂದೆಡೆ ಜಿಲ್ಲೆಯಲ್ಲಿ ಕೊರೊನಾಗೆ ತುತ್ತಾಗುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಜಿಲ್ಲೆಯಲ್ಲಿ ಇವತ್ತು 548 ಮಂದಿಗೆ ಪಾಸಿಟಿವ್ ಬಂದಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನ 147, ಭದ್ರಾವತಿಯ 68, ತೀರ್ಥಹಳ್ಳಿಯ 49, ಶಿಕಾರಿಪುರದಲ್ಲಿ 103, ಸಾಗರದ 57, ಹೊಸನಗರದಲ್ಲಿ 37, ಸೊರಬದಲ್ಲಿ 76, ಹೊರ ಜಿಲ್ಲೆಯಿಂದ ಬಂದಿರುವ 11 ಮಂದಿಗೆ ಸೋಂಕು ತಗುಲಿದೆ.
2500ಕ್ಕೂ ಹೆಚ್ಚು ಹೋಮ್ ಐಸೊಲೇಷನ್
ಇನ್ನು, ಸೋಂಕಿತರ ಪ್ರಮಾಣ ಏರಿಕೆಯಾದಂತೆ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯು ಹೆಚ್ಚಳವಾಗುತ್ತಿದೆ. ಇವತ್ತು ಜಿಲ್ಲೆಯಲ್ಲಿ 2617 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 2513 ಸೋಂಕಿತರು ಹೋಮ್ ಐಸೊಲೇಷನ್’ಗೆ ಒಳಗಾಗಿದ್ದಾರೆ.
ಕೋವಿಡ್ ಆಸ್ಪತ್ರೆಯಲ್ಲಿ 55 ಮಂದಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 9 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿಸಿಹೆಚ್’ಸಿಯಲ್ಲಿ 20, ಟ್ರಯೇಜ್’ನಲ್ಲಿ 20 ಮಂದಿ ದಾಖಲಾಗಿದ್ದಾರೆ ಎಂದು ಜಿಲ್ಲಾಡಳಿತದ ವರದಿಯಲ್ಲಿ ತಿಳಿಸಲಾಗಿದೆ.
ಮತ್ತೊಂದೆಡೆ ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 328 ಮಂದಿ ಸೋಂಕಿನಿಂದ ಗುಣವಾಗಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
Shimoga District Profile | About Shivamogga Live
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422