ಶಿವಮೊಗ್ಗದ ಲೈವ್.ಕಾಂ | SHIMOGA CRIME NEWS | 7 ಫೆಬ್ರವರಿ 2022
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದ ಶೌಚಾಲಯವನ್ನು ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಕಮೋಡ್’ಗಳನ್ನು ಒಡೆದು ಹಾಕಿದ್ದಾರೆ. ಅಲ್ಲದೆ ಸ್ಯಾನಿಟರಿ ಸಾಮಗ್ರಿಗಳನ್ನು ಹಾಳು ಮಾಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಉಪ ವಿಭಾಗಾಧಿಕಾರಿ ಕಚೇರಿ ಬಿಲ್ಡಿಂಗ್’ನಲ್ಲಿ ಜಿಲ್ಲಾಧಿಕಾರಿಗಳ ಸಭಾಂಗಣವಿದೆ. ಇದಕ್ಕೆ ಹೊಂದಿಕೊಂಡಂತೆ ಶೌಚಾಲಯವಿದೆ.
ಬೀಗ ಮುರಿದು ಕೃತ್ಯ
ಶೌಚಾಲಯದ ಬಾಗಿಲಿಗೆ ಹಾಕಿದ್ದ ಬೀಗವನ್ನು ಕಿಡಿಗೇಡಿಗಳು ಮುರಿದಿದ್ದಾರೆ. ಒಳಗೆ ಇದ್ದ ನಾಲ್ಕು ಕಮೋಡ್’ಗಳನ್ನು ಒಡೆದು ಹಾಕಲಾಗಿದೆ. ಸ್ಯಾನಿಟರಿ ಸಾಮಗ್ರಿಗಳನ್ನು ಹಾಳು ಮಾಡಲಾಗಿದೆ. ತಹಶೀಲ್ದಾರ್ ಅವರು ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.
ಸರ್ಕಾರಿ ಆಸ್ತಿ ಹಾನಿಗೊಳಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತಹಶೀಲ್ದಾರ್ ಡಾ.ನಾಗರಾಜ್ ಅವರು ದೂರು ನೀಡಿದ್ದಾರೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Shimoga District Profile | About Shivamogga Live | Whatsapp Number 7411700200