ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | THIRTHAHALLI NEWS | 7 ಫೆಬ್ರವರಿ 2022
ಗೃಹ ಸಚಿವರ ಕ್ಷೇತ್ರದಲ್ಲಿಯು ಹಿಜಾಬ್, ಕೇಸರಿ ಶಾಲು ಸಂಘರ್ಷ ಶುರುವಾಗಿದೆ. ತೀರ್ಥಹಳ್ಳಿ ತಾಲೂಕಿನ ಪ್ರಥಮ ದರ್ಜೆ ಕಾಲೇಜು ಒಂದರಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಬಾಳೆಬೈಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇವತ್ತು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು.
ತರಗತಿ ಪ್ರವೇಶ ನಿರಾಕರಣೆ
ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು ತರಗತಿ ಪ್ರವೇಶಿಸದಂತೆ ಪ್ರಾಂಶುಪಾಲರು, ಉಪನ್ಯಾಸಕರು ತಡೆದರು. ಹಾಗಾಗಿ ಕಾಲೇಜು ಆವರಣದಲ್ಲೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ವಸ್ತ್ರ ಸಂಹಿತೆಯನ್ನು ಕಡ್ಡಾಯಗೊಳಿಸಿದ ಮೇಲೆ ಹಿಜಾಬ್ ಧರಿಸಲು ಅವಕಾಶ ನೀಡಿದ್ದೇಕೆ. ಒಂದು ವೇಳೆ ಹಿಜಾಬ್’ಗೆ ಅವಕಾಶ ನೀಡಿದರೆ ತಾವು ಕೇಸರಿ ಶಾಲು ಧರಿಸಿ ಬರುತ್ತೇವೆ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದರು.
ಇದನ್ನೂ ಓದಿ | ಸಹ್ಯಾದ್ರಿ ಕಾಲೇಜು ಕ್ಯಾಂಪಸ್’ನಲ್ಲೂ ಹಿಜಾಬ್, ಕೇಸರಿ ಶಾಲು ಸಂಘರ್ಷ
About Shivamogga Live | Shimoga District Profile | Whatsapp Number 7411700200