ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 16 ಫೆಬ್ರವರಿ 2022
ನಲ್ಲಿ ನೀರಿನ ಪೈಪ್ ವಿಚಾರವಾಗಿ ಎರಡು ಕುಟುಂಬದ ನಡುವೆ ಜಗಳವಾಗಿದ್ದು, ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಎರಡು ಕುಟುಂಬದವರು ದೂರು, ಪ್ರತಿದೂರು ದಾಖಲಿಸಿದ್ದಾರೆ.
ಹೊಸಮನೆ ಬಡಾವಣೆಯಲ್ಲಿ ಘಟನೆ ಸಂಭವಿಸಿದೆ. ಓಡಾಡುವ ದಾರಿಯಲ್ಲಿ ನೀರಿನ ಪೈಪ್ ಹಾಕಿದ್ದ ವಿಚಾರವಾಗಿ ಗಲಾಟೆ ಶುರುವಾಗಿದೆ.
ಮಾತಿಗೆ ಮಾತು ಬೆಳೆದು ಎರಡು ಕುಟುಂಬದವರ ಮಧ್ಯೆ ನೂಕಾಟ, ತಳ್ಳಾಟವಾಗಿದೆ. ಸುನಿಲ್ ರಾವ್ ಎಂಬುವವರು ದರ್ಶನ್, ಚೇತನ್, ಚಂದ್ರಮತಿ ಅವರ ವಿರುದ್ಧ ದೂರು ನೀಡಿದ್ದಾರೆ. ಗಲಾಟೆ ವೇಳೆ ಎದೆಗೆ ಗುದ್ದಿದ್ದಾರೆ. ಇದರಿಂದ ತಾವು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಮತ್ತೊಂದೆಡೆ ಚಂದ್ರಮತಿ ಅವರು ದೂರು ನೀಡಿದ್ದು, ಸುನಿಲ್ ರಾವ್ ಮತ್ತು ಅವರ ಪತ್ನಿ ತಳ್ಳಿದರಿಂದ ಮೊಣಕಾಲಿಗೆ ಗಾಯವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ರಾತ್ರೋರಾತ್ರಿ ಕೋಟೆ ದೇವಸ್ಥಾನದ ಹುಂಡಿ ಕಳವು
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






