ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | THIRTAHALLI NEWS | 17 ಫೆಬ್ರವರಿ 2022
ಎಗ್ ರೈಸ್ ತಿನ್ನಲು ಬಂದ ಯುವಕನೊಬ್ಬನಿಗೆ ಬೈಕ್ ಡಿಕ್ಕಿಯಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಮಂಡಗದ್ದೆ ಸಮೀಪದ 17ನೇ ಮೈಲಿ ಕಲ್ಲು ಬಳಿ ಘಟನೆ ಸಂಭವಿಸಿದೆ. ರಾಜೇಶ್ ಎಂಬುವವರಿಗೆ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದರು.
ರಾಜೇಶ್ ಅವರ ಸಂಬಂಧಿಯೊಬ್ಬರು ಎಗ್ ರೈಸ್ ತಿನ್ನಲು ಬರುವಂತೆ ತಿಳಿಸಿದ್ದರು. ಮನೆಯಿಂದ ಹೊರ ಬಂದ ರಾಜೇಶ್ ಅವರು ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿಯಾಗಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದ ಬೈಕ್ ಅತಿ ವೇಗವಾಗಿ ಬಂದು ಡಿಕ್ಕಿ ಹೊಡದಿದೆ.
ಘಟನೆಯಲ್ಲಿ ರಾಜೇಶ್ ಅವರ ಕಾಲು, ಕೈಗೆ ಗಾಯವಾಗಿದೆ. ಕೂಡಲೆ ಅವರನ್ನು 108 ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಘಟನೆ ಸಂಬಂಧ ಬೈಕ್ ಸವಾರ ರಹಮತುಲ್ಲಾ ಎಂಬುವವರ ವಿರುದ್ಧ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಹಣಗೆರೆಯಲ್ಲಿ ಪೂಜೆ ಮುಗಿಸಿ ಹೊರ ಬಂದ ಹಾವೇರಿಯ ಭಕ್ತರಿಗೆ ಶಾಕ್
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






