ಶಿವಮೊಗ್ಗದಲೈವ್.ಕಾಂ | SHIMOGA NEWS | 18 ಫೆಬ್ರವರಿ 2022
ಖಾಸಗಿ ಆಂಬುಲೆನ್ಸ್ ಚಾಲಕರು 108 ಆಂಬುಲೆನ್ಸ್ ಚಾಲಕರೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಾಗಿದೆ. ಮೆಗ್ಗಾನ್ ಆಸ್ಪತ್ರೆ ಬಳಿ ಘಟನೆ ಸಂಭವಿಸಿದೆ.
108 ಆಂಬುಲೆನ್ಸ್ ಚಾಲಕ ಶಿವಮೂರ್ತಿ ಎಂಬುವವರ ಮೇಲೆ ಹಲ್ಲೆಯಾಗಿದೆ. ಶಿವಮೂರ್ತಿ ಅವರು ಆನಂದಪುರದಿಂದ ರೋಗಿಯೊಬ್ಬರನ್ನು ಕರೆತಂದು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಈ ಸಂಬಂಧ ದಾಖಲೆ ಪಡೆಯಲು ಆಸ್ಪತ್ರೆ ಒಳಗೆ ಹೋಗಿದ್ದರು.
ಹಿಂತಿರುಗಿ ಬಂದಾಗ ಮೂವರು ಖಾಸಗಿ ಆಂಬುಲೆನ್ಸ್ ಚಾಲಕರು ಶಿವಮೂರ್ತಿ ಅವರನ್ನು ತಡೆದು ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿದ್ದಾ. ಇನ್ನೊಮ್ಮೆ ಇಲ್ಲಿ ಆಂಬುಲೆನ್ಸ್ ನಿಲ್ಲಿಸದಂತೆ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ದೊಡ್ಡಪೇಟೆ ಪೊಲೀಸ್ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ