ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕಿಗೆ ಹಿಂಬದಿಯಿಂದ ಮತ್ತೊಂದು ಬೈಕ್ ಡಿಕ್ಕಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 20 ಫೆಬ್ರವರಿ 2022

ಚಲಿಸುತ್ತಿದ್ದ ಬೈಕಿಗೆ ಹಿಂಬದಿಯಿಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಗಾಯಗೊಂಡಿದ್ದು, ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Shimoga Nanjappa Hospital Cancer Care Center

ಸಾಗರ ರಸ್ತೆಯ ಪಿಇಎಸ್ ಕಾಲೇಜು ಬಳಿ ಘಟನೆ ಸಂಭವಿಸಿದೆ. ಅರುಣ್ ಕುಮಾರ್ ಎಂಬುವವರು ಸಮೀಪದ ಫಾರಂಗೆ ಹೋಗಿ ಕೆಲಸ ಮುಗಿಸಿ ಶಿವಮೊಗ್ಗಕ್ಕೆ ಮರಳುತ್ತಿದ್ದರು. ಅರುಣ್ ಕುಮಾರ್ ಅವರು ಚಲಿಸುತ್ತಿದ್ದ ಬೈಕಿಗೆ ಅದೆ ಮಾರ್ಗದಲ್ಲಿ ವೇಗವಾಗಿ ಬಂದ ಮತ್ತೊಂದು ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದಿದ್ದರಿಂದ ಅರುಣ್ ಕುಮಾರ್ ಅವರು ಕೆಳಗೆ ಬಿದ್ದಿದ್ದು ಕಾಲು, ಭುಜ, ಕೈಗೆ ಗಾಯವಾಗಿದೆ. ಕೂಡಲೆ ಅವರನ್ನು ನಂಜಪ್ಪ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು.

ಡಿಕ್ಕಿ ಹೊಡೆದ ಬೈಕ್ ಸವಾರನ ವಿರುದ್ಧ ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | ಮಹಿಳೆ ಸ್ನಾನ ಮಾಡುವುದನ್ನು ಕದ್ದು ನೋಡಿದ ಯುವಕ, ಪ್ರಶ್ನಿಸಿದ್ದಕ್ಕೆ ವ್ಯಕ್ತಿಗೆ ಮಚ್ಚಿನಿಂದ ಹಲ್ಲೆ

Shivamogga Live News Reach January report

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment