ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ, ಶಾಲೆ, ಕಾಲೇಜಿಗೆ ರಜೆ, ಬಿಗಿ ಬಂದೋಬಸ್ತ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022

ಭಜರಂಗದಳ ಕಾರ್ಯಕರ್ತನ ಬರ್ಬರ ಹತ್ಯೆ ಬೆನ್ನಿಗೆ ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Shimoga Nanjappa Hospital Cancer Care Center

ದುಷ್ಕರ್ಮಿಗಳ ಗುಂಪು ಹರ್ಷ (22) ಎಂಬಾತನನ್ನು ಹತ್ಯೆ ಮಾಡಿದ್ದಾರೆ. ಇದರಿಂದ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ

ಹತ್ಯೆ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಆದ್ದರಿಂದ ನಗರದಾದ್ಯಂತ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಸೋಮವಾರ ಮತ್ತು ಮಂಗಳವಾರದಂದು ನಗರದಲ್ಲಿ ನಿಷೆಧಾಜ್ಞೆ ಜಾರಿಗೊಳಿಸಲಾಗಿದೆ.

ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಬಿಗುವಿನ ವಾತಾವರಣ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸೋಮವಾರ ನಗರ ವ್ಯಾಪ್ತಿಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸಿಟಿಯಲ್ಲಿ ಬಿಗಿ ಬಂದೋಬಸ್ತ್

ಹರ್ಷನ ಹತ್ಯೆ ಬಳಿಕ ಶಿವಮೊಗ್ಗ ನಗರದ ವಿವಿಧೆಡೆ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ರವಿವರ್ಮಾ ಬೀದಿ, ಆಜಾದ್ ನಗರದಲ್ಲಿ ಜನ ಗುಂಪುಗೂಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಜನರನ್ನು ಚದುರಿಸಿದ್ದಾರೆ. ಅಹಿತಕರ ಘಟನೆ ನಡೆಯದಂತೆ ತಡೆಯಲು ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಜಿಲ್ಲಾಧಿಕಾರಿ, ರಕ್ಷಣಾಧಿಕಾರಿ ರೌಂಡ್ಸ್

ಪರಿಸ್ಥಿತಿ ತಿಳಿಗೊಳಿಸುವ ಸಲುವಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮಿಪ್ರಸಾದ್ ಅವರು ಸಿಟಿ ರೌಂಡ್ಸ್ ಮಾಡಿದರು. ನಗರದ ವಿವಿಧೆಡೆ ತೆರಳಿದ ಅಧಿಕಾರಿಗಳು ಬಂದೋಬಸ್ತ್ ಪರಿಶೀಲನೆ ನಡೆಸಿದರು.

ಇದನ್ನೂ ಓದಿ | ಶಿವಮೊಗ್ಗದಲ್ಲಿ ಯುವಕನ ಬರ್ಬರ ಹತ್ಯೆ, ಬಿಗುವಿನ ವಾತಾವರಣ

Shimoga Live New Website Age Wise Reach

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment