ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 21 ಫೆಬ್ರವರಿ 2022
ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಬೆನ್ನಿಗೆ ಶಿವಮೊಗ್ಗ ನಗರ ಪ್ರಕ್ಷುಬ್ದಗೊಂಡಿದೆ. ಮುಂಜಾಗ್ರತ ಕ್ರಮವಾಗಿ ಭದ್ರಾವತಿ ಪಟ್ಟಣದಲ್ಲಿಯು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಸಂಬಂಧ ತಹಶೀಲ್ದಾರ್ ಪ್ರದೀಪ್ ಅವರು ಆದೇಶ ಹೊರಡಿಸಿದ್ದಾರೆ.
ಫೆ.21ರ ಬೆಳಗ್ಗೆ 8 ಗಂಟೆಯಿಂದ ಫೆ.22ರ ರಾತ್ರಿ 10 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿಜನರು ಗುಂಪುಗೂಡುವಂತೆ ಇಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಭದ್ರಾವತಿ ನಗರದಲ್ಲಿಯು ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ದ್ವಿಚಕ್ರ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ರಾತ್ರಿ 9 ಗಂಟೆ ನಂತರ ಅಂಗಡಿ ಮುಂಗಟ್ಟು ಮುಚ್ಚಬೇಕು, ಚಲನಚಿತ್ರ ಪ್ರದರ್ಶನ ನಿಷೇಧಿಸಲಾಗಿದೆ.
ಶಾಲೆಗಳಿಗೆ ರಜೆ ಘೋಷಣೆ
ಮುಂಜಾಗ್ರತ ಕ್ರಮವಾಗಿ ಭದ್ರಾವತಿ ನಗರ ವ್ಯಾಪ್ತಿಯಲ್ಲಿ ಫೆ.21ರಂದು 1 ರಿಂದ 10 ತರಗತಿವರೆಗೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷಗಳನ್ನು ಕೂಡ ಮುಂದೂಡಲಾಗಿದೆ ಎಂದು ತಹಶೀಲ್ದಾರ್ ಪ್ರದೀಪ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ರಾತ್ರಿ ಬೈಕ್ ಸಂಚಾರ ನಿಷೇಧ, ಅಂಗಡಿಗಳು ಬಂದ್ ಮಾಡಲು ಟೈಮ್ ಫಿಕ್ಸ್
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






