ಶಿವಮೊಗ್ಗ ಕೋರ್ಟ್’ಗೆ ಸಾಕ್ಷಿ ಹೇಳಲು ಬಂದ ವ್ಯಕ್ತಿಯ ಮರ್ಮಾಂಗಕ್ಕೆ ಒದ್ದು ಬೆದರಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಫೆಬ್ರವರಿ 2022

ಪ್ರಕರಣ ಒಂದರ ಸಾಕ್ಷಿ ಹೇಳಲು ಶಿವಮೊಗ್ಗದ ನ್ಯಾಯಾಲಯಕ್ಕೆ ಆಗಮಿಸಿದ್ದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ. ಮರ್ಮಾಂಗಕ್ಕೆ ಒದ್ದು ರಾಜಿ ಮಾಡಿಕೊಳ್ಳುವಂತೆ ಬೆದರಿಕೆ ಒಡ್ಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Shimoga Live News Website Reach

ಹನುಮಂತಪ್ಪ ಎಂಬುವವರ ಮೇಲೆ ಕೋರ್ಟ್ ಆವರಣದಲ್ಲಿ ಹಲ್ಲೆ ನಡೆಸಲಾಗಿದೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏನಿದು ಪ್ರಕರಣ?

ಮಂಗಳವಾರ ಹನುಮಂತಪ್ಪ ಅವರು ಪ್ರಕರಣವೊಂದರಲ್ಲಿ ಸಾಕ್ಷಿ ಹೇಳಲು ನ್ಯಾಯಾಲಯಕ್ಕೆ ಆಗಮಿಸಿದ್ದರು. ಈ ಸಂದರ್ಭ ನಾಗರಾಜ, ಕಿರಣ, ಸೂರ್ಯ ಎಂಬುವವರು ಹನುಮಂತಪ್ಪ ಅವರ ಮೇಲೆ ಕೋರ್ಟ್ ಆವರಣದಲ್ಲಿ ಹಲ್ಲೆ ನಡೆಸಿದ್ದರೆ ಎಂದು ಆರೋಪಿಸಲಾಗಿದೆ.

ಮರ್ಮಾಂಗಕ್ಕೆ ಒದ್ದು ಈ ಪ್ರಕರಣದಲ್ಲಿ ರಾಜಿ ಆಗಬೇಕು ಎಂದು ಬೆದರಿಕೆ ಒಡ್ಡಿದ್ದಾರೆ ಎಂದು ಹನುಮಂತಪ್ಪ ದೂರಿನಲ್ಲಿ ಆರೋಪಿಸಿದ್ದಾರೆ.

ಜಯನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | ಹರ್ಷ ಹತ್ಯೆ ಕೇಸ್, ಭದ್ರಾವತಿಯ ಒಬ್ಬ ಸೇರಿ ಇಬ್ಬರು ಅರೆಸ್ಟ್

Shimoga Nanjappa Hospital Testing List Graphics

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment