ಶಿವಮೊಗ್ಗದಲ್ಲಿ ರಸ್ತೆಗಿಳಿದ ಸಿಟಿ ಬಸ್, ನಿಟ್ಟುಸಿರು ಬಿಟ್ಟ ಖಾಸಗಿ ಬಸ್ ಮಾಲೀಕರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 26 ಫೆಬ್ರವರಿ 2022

ಕರ್ಫ್ಯೂ ಸಡಿಲಗೊಳಿಸಿದ ಬೆನ್ನಿಗೆ ಶಿವಮೊಗ್ಗ ನಗರದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಹಳಿಗೆ ಬಂದಿದೆ. ನಗರ ಸಾರಿಗೆ ಬಸ್ಸುಗಳು ಸಂಚಾರ ಆರಂಭಿಸಿವೆ. KSRTC ಮತ್ತು ಖಾಸಗಿ ಬಸ್ಸುಗಳಲ್ಲಿ ಹೆಚ್ಚು ಪ್ರಯಾಣಿಕರು ಕಾಣಿಸುತ್ತಿದ್ದಾರೆ.

Shimoga Nanjappa Hospital Covid Care Center

ಸೋಮವಾರದಿಂದ ಶಿವಮೊಗ್ಗ ನಗರ ಸಾರಿಗೆ ಬಸ್ಸುಗಳು ಸಂಚಾರ ನಿಲ್ಲಿಸಿದ್ದವು. ಇವತ್ತು ಬೆಳಗ್ಗೆಯಿಂದ ಬಸ್ ಸಂಚಾರ ಪುನಾರಂಭವಾಗಿದೆ. ನಗರದ ವಿವಿಧೆಡೆ ಬಸ್ಸುಗಳು ಸಂಚರಿಸಿದವರು. ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಗಾಂಧಿ ಬಜಾರ್ ಸೇರಿದಂತೆ ವಿವಿಧ ಮಾರುಕಟ್ಟೆಗೆ ಭೇಟಿ ನೀಡುವವರು ಈ ನಗರ ಸಾರಿಗೆ ಬಸ್ಸುಗಳನ್ನು ಅವಲಂಬಿಸಿದ್ದರು.

ಖಾಸಗಿ ಬಸ್ಸುಗಳು : ದೂರದ ಊರುಗಳಿಗೆ ತೆರಳುವ ಖಾಸಗಿ ಬಸ್ಸುಗಳಲ್ಲಿಯು ಪ್ರಯಾಣಿಕರ ಸಂಖ್ಯೆ ಏರಿಕೆಯಾಗಿತ್ತು. ಕರ್ಫ್ಯೂ ಜಾರಿಯಾದ ಬಳಿಕ ಸರ್ಕಾರಿ ಉದ್ಯೋಗಿಗಳು, ವಿವಿಧ ಸಂಸ್ಥೆಯ ಉದ್ಯೋಗಿಗಳು ಮಾತ್ರ ಬಸ್ಸು ಹತ್ತುತ್ತಿದ್ದರು. ನಿಷೇಧಾಜ್ಞೆ ಸಡಿಲಗೊಂಡ ಹಿನ್ನೆಲೆ ಬಸ್ಸುಗಳಲ್ಲಿ ಪ್ರಯಾಣಿಕರು ಹೆಚ್ಚಳವಾಗಿದ್ದಾರೆ.

ಸರ್ಕಾರಿ ಬಸ್ಸುಗಳು : ಇತ್ತ ಸರ್ಕಾರಿ ಬಸ್ ನಿಲ್ದಾಣದಲ್ಲಿಯು ಪ್ರಯಾಣಿಕರ ಸಂಖ್ಯೆ ಸಹಜ ಸ್ಥಿತಿಗೆ ಮರಳಿದೆ. ವಿವಿಧೆಡೆಗೆ ತೆರಳುವ ಬಸ್ಸುಗಳಲ್ಲಿ ಪ್ರಯಾಣಿಕರ ಸಂಖ್ಯೆ ಇತ್ತು.

ಇದನ್ನೂ ಓದಿ | ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಸಡಿಲ, ಗಾಂಧಿ ಬಜಾರ್ ಹೇಗಿದೆ? ಉಳಿದೆಡೆಯ ಸ್ಥಿತಿ ಏನು?

Shimoga Live Age Wise Reach Graphics

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment