ಜೂಜಾಟದಲ್ಲಿ ತೊಡಗಿದ್ದವರ ವಿರುದ್ಧ ಆನವಟ್ಟಿ ಠಾಣೆಯಲ್ಲಿ ಎರಡು ಪ್ರತ್ಯೇಕ ಕೇಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 ಮಾರ್ಚ್ 2022

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದವರ ವಿರುದ್ಧ, ಸೊರಬ ತಾಲೂಕು ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಕೇಸ್ 1 : ಚಿಕ್ಕ ಹಿಡಗೋಡು ಗ್ರಾಮ

ಇಲ್ಲಿನ ಆರೊಟ್ಟಿ ಕೆರೆ ಬಳಿ ಸುಮಾರು 8 ಮಂದಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದರು. ಖಚಿತ ಮಾಹಿತಿ ಮೇರೆಗೆ ಪರಿಶೀಲನೆ ನಡೆಸಿದ ಪೊಲೀಸ್ ಸಿಬ್ಬಂದಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಕೇಸ್ 2 : ಬಿಳಗಲಿ ಗ್ರಾಮ

ರಸ್ತೆ ಪಕ್ಕದ ಮರವೊಂದರ ಕೆಳಗೆ ಸುಮಾರು 5 ಮಂದಿ ಗುಂಪು ಕಟ್ಟಿಕೊಂಡು ಜೂಜಾಟದಲ್ಲಿ ತೊಡಗಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ಪರಿಶೀಲನೆ ನಡೆಸಿದ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಆನವಟ್ಟಿ ಠಾಣೆ ಪೊಲೀಸರು ಪ್ರಕರಣ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | ಸೇತುವೆ ಕಟ್ಟೆಗೆ ಲಾರಿ ಡಿಕ್ಕಿ, ಹಿಂಬದಿ ಇದ್ದ ಅಕೇಶಿಯಾ ಪೋಲ್ಸ್ ಬಿದ್ದು ವೈದ್ಯ ಸೇರಿ ಇಬ್ಬರಿಗೆ ಗಾಯ

Shimoga Nanjappa Hospital checkup list

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 1, 2022

Leave a Comment