SHIVAMOGGA LIVE NEWS | 2 ಮಾರ್ಚ್ 2022
ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆಸಿದ ಬೈಕ್ ಸವಾರನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರಕರಣ ದಾಖಲಾಗಿದೆ.
ಸಾಗರದ ಸುಭಾಷ್ ನಗರದ ಚಾಂಪ್ಲಾನಾಯ್ಕ ಅವರು ಕೆಲಸದ ನಿಮಿತ್ತ ಪಟ್ಟಣಕ್ಕೆ ತೆರಳಿದ್ದರು. ರಸ್ತೆ ಪಕ್ಕದಲ್ಲಿ ನಡೆದುಕೊಂಡು ಮನೆಗೆ ಹಿಂತಿರುಗುತ್ತಿದ್ದರು. ಕೆಳದಿ ಸರ್ಕಲ್ ಬಳಿ ಹಿಂಬದಿಯಿಂದ ವೇಗವಾಗಿ ಬಂದ ಬೈಕ್ ಸವಾರ ಚಾಂಪ್ಲಾನಾಯ್ಕ ಅವರಿಗೆ ಡಿಕ್ಕಿ ಹೊಡೆಸಿದ್ದಾನೆ.
ಘಟನೆಯಲ್ಲಿ ಚಾಂಪ್ಲಾನಾಯ್ಕ ಅವರ ಹಣೆ, ಕಣ್ಣಿನ ಭಾಗ, ಮೂಗು, ಎಡ ಕೆನ್ನೆ ಭಾಗಕ್ಕೆ ಗಾಯವಾಗಿದೆ. ಸ್ಥಳೀಯರು ಚಾಂಪ್ಲಾನಾಯ್ಕ ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಚಾಂಪ್ಲಾನಾಯ್ಕ ಅವರಿಗೆ ಡಿಕ್ಕಿ ಹೊಡೆದ ಬೈಕ್ ಸವಾರನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ, ಸಾಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
- ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?
- ಅಡಿಕೆ ಧಾರಣೆ | 20 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
- ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?
- ಶಿವಮೊಗ್ಗ ಜಿಲ್ಲೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು