SHIVAMOGGA LIVE NEWS | 4 ಮಾರ್ಚ್ 2022
ಕಳೆದ ಎರಡು ಬಜೆಟ್’ನಲ್ಲಿ ಘೋಷಿಸಿದ ಯೋಜನೆಗಳನ್ನು ಜಾರಿಗೊಳಿಸದೆ ಹೊಸ ಬಜೆಟ್ ಮಂಡನೆ ಮಾಡುತ್ತಿರುವುದಕ್ಕೆ ಕಾಂಗ್ರೆಸ್, ಜೆಡಿಎಸ್ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್ ಮಂಡನೆ ವೇಳೆ ಎರಡೂ ಪಕ್ಷಗಳ ಕಾರ್ಪೊರೇಟರ್’ಗಳು ಪ್ರತಿಭಟನೆ ನಡೆಸಿದರು.
ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಬಜೆಟ್ ಮಂಡನೆ ವೇಳೆ ಕಾಂಗ್ರೆಸ್, ಜೆಡಿಎಸ್ ಸದಸ್ಯರ ಪ್ರತಿಭಟನೆ ನಡೆಸಿದರು. ಆಡಳಿತ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಮೇಯರ್ ಟೇಬಲ್ ಮುಂದೆ ಆಕ್ರೋಶ
ಆರಂಭದಲ್ಲಿ ತಮ್ಮ ಸ್ಥಾನದಲ್ಲಿ ನಿಂತು ಜೆಡಿಎಸ್, ಕಾಂಗ್ರೆಸ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಆಮೇಲೆ ಮೇಯರ್ ಟೇಬಲ್ ಮುಂಭಾಗ ಬಂದು ಘೋಷಣೆ ಕೂಗಿದರು. ಈ ಗದ್ದಲದ ನಡುವೆಯು ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ರವಿಶಂಕರ್ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡಿದರು.
ಭಿತ್ತ ಪತ್ರ ಹಿಡಿದು ಘೋಷಣೆ
ಕಳೆದ ಎರಡು ಅವಧಿ ಬಜೆಟ್’ನಲ್ಲಿ ಘೋಷಿಸಿದ ಯೋಜನೆಗಳ ಪಟ್ಟಿ ಮುದ್ರಿಸಿದ ಭಿತ್ತಿ ಪತ್ರ ಹಿಡಿದು ಪ್ರತಿಭಟನೆ ನಡೆಸಿದರು. ಯಾವ ಯೋಜನೆಗಳನ್ನೂ ಜಾರಿಗೊಳಿಸಿಲ್ಲ ಎಂದು ಜೆಡಿಎಸ್, ಕಾಂಗ್ರೆಸ್ ಕಾರ್ಪೊರೇಟರ್’ಗಳು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ | ಶಿವಮೊಗ್ಗ ಪಾಲಿಕೆ ಬಜೆಟ್ ಮಂಡನೆ, ಯಾವ್ಯಾವುದಕ್ಕೆ ಎಷ್ಟು ಮೀಸಲು, ಯಾವ ವಾರ್ಡ್’ಗೆ ಏನೇನು ಸಿಕ್ತು?
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200