ಲಾರಿ ಕದ್ದವರನ್ನು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಜನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 ಮಾರ್ಚ್ 2022

ಲಾರಿ ಕಳ್ಳತನ ಮಾಡಿ ತೆಗೆದುಕೊಂಡು ಹೋಗುತ್ತಿದ್ದ ಕಳ್ಳರನ್ನು ಬೆನ್ನಟ್ಟಿ ಸಿನಿಮೀಯ ಶೈಲಿಯಲ್ಲಿ ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಒಬ್ಬನನ್ನು ಬಂಧಿಸಲಾಗಿದ್ದು, ಮೂವರು ಪರಾರಿಯಾಗಿದ್ದಾರೆ.

ಬಂಧಿತನನ್ನು ನ್ಯಾಮತಿಯ ಕರಿಬಸಪ್ಪ ಎಂದು ಗುರುತಿಸಲಾಗಿದೆ. ಹಾಲೇಶ್, ಮಂಜು, ಗೌಸ್ ಪೀರ್ ಪರಾರಿಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ.

ಏನಿದು ಘಟನೆ?

ಸಾಗರದ ಮಲಂದೂರು ಗ್ರಾಮದ ಇಬ್ರಾಹಿಂ ಎಂಬುವವರಿಗೆ ಸೇರಿದ ಲಾರಿಯನ್ನು ಮಧ್ಯರಾತ್ರಿ ಕಳ್ಳತನ ಮಾಡಲಾಗಿತ್ತು. ಕದ್ದ ಲಾರಿ ಕುಂಸಿ – ಹಾರ್ನಹಳ್ಳಿ ನಡುವೆ ಸಂಚರಿಸುತ್ತಿತ್ತು. ಸಂಬಂಧಿಕರ ಮನೆಗೆ ಬಂದಿದ್ದ ಮಲಂದೂರಿನ ಒಬ್ಬರು ಲಾರಿಯನ್ನು ಗಮನಿಸಿ, ಇಬ್ರಾಹಿಂ ಅವರಿಗೆ ಕರೆ ಮಾಡಿದ್ದಾರೆ. ಆಗ ಕಳ್ಳತನದ ವಿಚಾರ ಬಯಲಾಗಿದೆ.

ಲಾರಿಯನ್ನು ಅಡ್ಡಗಟ್ಟಿದರು

ಕಳ್ಳತನ ಆಗಿರುವ ವಿಚಾರ ತಿಳಿಯುತ್ತಿದ್ದ ಹಾಗೆ ಮಲಂದೂರಿನ ಕೆಲವರು ಹಾರ್ನಹಳ್ಳಿಗೆ ಬಂದಿದ್ದಾರೆ. ಲಾರಿಯನ್ನು ಅಡ್ಡಗಟ್ಟಿದ್ದಾರೆ. ಸಿಕ್ಕಿಬೀಳುವ ಭೀತಿಯಲ್ಲಿ ನಾಲ್ವರು ಕಳ್ಳರು ಲಾರಿಯಿಂದ ಹಾರಿ ಪರಾರಿಯಾಗಲು ಯತ್ನಿಸಿದ್ದಾರೆ.

ಈ ಸಂದರ್ಭ ನ್ಯಾಮತಿಯ ಕರಿಬಸಪ್ಪ ಸಿಕ್ಕಿಬಿದ್ದಿದ್ದಾನೆ. ಕೂಡಲೆ ಆತನನ್ನು ಆನಂದಪುರದ ಉಪ ಠಾಣೆಯ ಪೊಲೀಸರಿಗೆ ಒಪ್ಪಿಸಲಾಗಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 6, 2022

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment