ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 ಮಾರ್ಚ್ 2022
ವ್ಯಕ್ತಿಯೊಬ್ಬರ ಮೇಲೆ ಪಿಎಸ್ಐ ಮತ್ತು ಕಾನ್ಸ್ ಟೇಬಲ್ ಒಬ್ಬರು ಲಾಠಿಯಿಂದ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರು ತನಿಖೆಗೆ ಆದೇಶಿಸಿದ್ದಾರೆ.
ವಿಡಿಯೋ ವೈರಲ್ ಆದ ಬೆನ್ನಿಗೆ ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದೆ. ‘ಸಾಮಾಜಿಕ ಜಾಲ ತಾಣದಲ್ಲಿ ಹೊಸನಗರ ಪೊಲೀಸ್ ಠಾಣೆ ಪಿಎಸ್ಐ ಅವರು ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿರುತ್ತಾರೆ ಎಂದು ವಿಡಿಯೋ ವೈರಲ್ ಆಗಿದೆ. ಇದು ತಮ್ಮ ಗಮನಕ್ಕೆ ಬಂದಿದೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಘಟನೆ ಸಂಬಂಧ ತೀರ್ಥಹಳ್ಳಿ ಡಿವೈಎಸ್’ಪಿ ಅವರು ವಿಚಾರಣೆ ನಡೆಸಿ ವರದಿ ನೀಡುವಂತೆ ನೇಮಿಸಲಾಗಿದೆ. ವಿಚಾರಣೆ ಬಳಿಕ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ತಿಳಿಸಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

- ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ, ಇಲ್ಲಿದೆ ಡಿಟೇಲ್ಸ್

- ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

- ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್ ವಾಪಸ್

- ಸರ್ಕಾರಿ ಕೆಲಸ ಕೊಡಿಸುವುದಾಗಿ ಲಕ್ಷ ಲಕ್ಷ ಪಡೆದ ದಂಪತಿ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





