ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 ಮಾರ್ಚ್ 2022
ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯಲ್ಲಿ ಆಟೋ ಕಾರು ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಆಟೋದಲ್ಲಿದ್ದ ತಾಯಿ ಮತ್ತು ಮಗನಿಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪಿಳ್ಳಂಗೆರೆಯ ಫಜಲು ರೆಹಮಾನ್ ಮತ್ತು ಅವರ ತಾಯಿ ಆಸಿಯಾಬಿ ಗಾಯಗೊಂಡಿದ್ದಾರೆ.
ಫಜಲು ರೆಹಮಾನ್ ಅವರು ತಮ್ಮ ಆಟೋದಲ್ಲಿ ತಾಯಿಯನ್ನು ಕೂರಿಸಿಕೊಂಡು ಶುಕ್ರವಾರ ರಾತ್ರಿ ಶಿವಮೊಗ್ಗದಿಂದ ಪಿಳ್ಳಂಗೆರೆಗೆ ತೆರಳುತ್ತಿದ್ದರು. ಪಿಳ್ಳಂಗೆರೆ ಸಮೀಪ ಚೌಡೇಶ್ವರಿ ದೇವಸ್ಥಾನದ ಬಳಿ ಎದುರಿನಿಂದ ಬಂದ ಕಾರು ಆಟೋಗೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಆಟೋದಲ್ಲಿದ್ದ ತಾಯಿ, ಮಗ ಇಬ್ಬರೂ ಗಾಯಗೊಂಡಿದ್ದಾರೆ. ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















