ಭದ್ರಾವತಿಯಲ್ಲಿ ಮನೆ ಬಳಿ ಬಾವಿಗೆ ಹಾರಿ ಗೃಹಿಣಿ ಆತ್ಮಹತ್ಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 ಮಾರ್ಚ್ 2022

ಮನೆ ಸಮೀಪದ ಬಾವಿಗೆ ಹಾರಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಗೃಹಿಣಿಯ ಅತ್ತೆ ವಿರುದ್ಧ ಪ್ರಕರಣ ದಾಖಲಾಗಿದೆ.

Shimoga Nanjappa Hospital

ಭದ್ರಾವತಿ ತಾಲೂಕು ನಾಗತಿಬೆಳಗಲು ಗ್ರಾಮದ ಶಶಿಕಲಾ (23) ಮೃತಳು. ಪತಿ ಮತ್ತು ಮಾವ ಕೆಲಸಕ್ಕೆ ತೆರಳಿದ ಬಳಿಕ ಘಟನೆ ಸಂಭವಿಸಿದೆ.

ಅತ್ತೆ ಮಂಜುಳಮ್ಮ ಜೊತೆಗೆ ಜಗಳವಾಗಿದೆ. ಇದರಿಂದ ಮನನೊಂದು ಶಶಿಕಲಾ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಶಶಿಕಲಾಗೆ ಒಂದೂವರೆ ವರ್ಷದ ಮಗು ಇದೆ.

ಘಟನೆ ಸಂಬಂಧ ಮಂಜುಳಮ್ಮ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಶಿಕಲಾ ಅವರ ಪೋಷಕರು ದೂರು ನೀಡಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 6, 2022

Leave a Comment