SHIVAMOGGA LIVE NEWS | 6 ಮಾರ್ಚ್ 2022
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರನ್ನೆ ಇಡಬೇಕು ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ.
ಕುವೆಂಪು ರಂಗಮಂದಿರದಲ್ಲಿ ವೀರಶೈವ ಮಹಾಸಭಾದ ವತಿಯಿಂದ ಆಯೋಜಿಸಿದ್ದ ಕೆಳದಿ ಶಿವಪ್ಪನಾಯಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ ಅವರು, ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಅವರ ಹೆಸರನ್ನೆ ಯಾಕೆ ಇಡಬಾರದು ಎಂದು ಪ್ರಶ್ನಿಸಿದರು.
ಶಿವಮೊಗ್ಗ ಅಭಿವೃದ್ದಿ ಆಗಲು ಯಡಿಯೂರಪ್ಪ ಅವರೆ ಕಾರಣ. ಆದ್ದರಿಂದ ವಿಮಾನ ನಿಲ್ದಾಣಕ್ಕೆ ಅವರ ಹೆಸರನ್ನೆ ಇಡಬೇಕು. ಇದರ ಬಗ್ಗೆ ಟೀಕೆಗಳು ಬರಬಹುದು. ಈ ಟೀಕೆಗಳನ್ನು ನಾವು ಲೆಕ್ಕಕ್ಕೆ ಇಟ್ಟುಕೊಳ್ಳುವುದಿಲ್ಲ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗದೆ ಇದ್ದಿದ್ದರೆ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಆಗುತ್ತಿರಲಿಲ್ಲ ಎಂದರು.
ಯಡಿಯೂರಪ್ಪ ಅವರಿಗೆ ಹೆಚ್ಚು ಸಿಟ್ಟು
ಯಡಿಯೂರಪ್ಪ ಅವರಿಗೆ ಹೆಚ್ಚು ಸಿಟ್ಟು. ತಾವು, ಆಯನೂರು ಮಂಜುನಾಥ್, ರಾಘವೇಂದ್ರ ಅವರು ಈ ಸಿಟ್ಟನ್ನು ಅನುಭವಿಸಿದ್ದೇವೆ. ಪ್ರೀತಿ ಇದ್ದರೆ ಮೇಲೆ ಮಾತ್ರ ಯಡಿಯೂರಪ್ಪ ಅವರು ಸಿಟ್ಟು ಮಾಡುತ್ತಾರೆ. ಅವರ ಸಿಟ್ಟಿಗೆ ಕಾರಣವೇನು ಎಂದು ತಿಳಿದುಕೊಂಡು, ಅವರು ಸೂಚಿಸಿದಂತೆ ನಡೆದರೆ ಎಲ್ಲರಿಗೂ ಅನುಕೂಲವಾಗಲಿದೆ ಎಂದು ಈಶ್ವರಪ್ಪ ತಿಳಿಸಿದರು.
ಯಡಿಯೂರಪ್ಪ ಅವರನ್ನು ಜಾತಿವಾದಿ ಎಂದು ಆರೋಪಿಸುವವರಿದ್ದಾರೆ. ಆದರೆ ಬೆಳಗ್ಗೆ ಪೂಜೆ ಮುಗಿಸಿದ ಬಳಿಕ ಹರಿಜನ ಕೇರಿಗೆ ಮೊದಲು ಹೋಗಿ ಬರುತ್ತಿದ್ದರು. ಇನ್ನು, ಕನಕ ಜಯಂತಿಗೆ ರಜೆ ಘೋಷಣೆ ಮಾಡಿದ್ದು ಯಡಿಯೂರಪ್ಪ ಅವರೆ. ಕುರುಬರ ಮತಕ್ಕಾಗಿ ಈ ನಿರ್ಧಾರ ಪ್ರಕಟಿಸಿದ್ದಲ್ಲ. ಸಮಾನತೆಯನ್ನು ತೋರಿಸುವುದಕ್ಕಾಗಿ ಎಂದು ತಿಳಿಸಿದರು.
ಇದನ್ನೂ ಓದಿ | ಮಾಜಿ ಸಿಎಂ ಯಡಿಯೂರಪ್ಪಗೆ ಶಿವಮೊಗ್ಗದಲ್ಲಿ ಕೆಳದಿ ಶಿವಪ್ಪನಾಯಕ ಪ್ರಶಸ್ತಿ
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
- ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?
- ಅಡಿಕೆ ಧಾರಣೆ | 20 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
- ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?
- ಶಿವಮೊಗ್ಗ ಜಿಲ್ಲೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು