ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 7 ಮಾರ್ಚ್ 2022
ಹರ್ಷ ಹತ್ಯೆ ಖಂಡಿಸಿ ಶಿವಮೊಗ್ಗದ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಇವತ್ತು ಪ್ರತಿಭಟನೆ ನಡೆಸಿದರು. ಹತ್ಯೆ ಪ್ರಕರಣದಲ್ಲಿ ಭಾಗಿಯಾದವರನ್ನು ಗಲ್ಲು ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿಲ್ಲೆಯ ವಿವಿಧೆಡೆಯಿಂದ ಕಾರ್ಯಕರ್ತರು ಪ್ರತಿಭಟನೆಗೆ ಆಗಮಿಸಿದ್ದರು.
4 ಪ್ರಮುಖ ಡಿಮಾಂಡ್
ಬೇಡಿಕೆ 1 – ಹರ್ಷ ಹತ್ಯೆ ಪ್ರಕರಣ ಸಂಬಂಧ ಎಲ್ಲರನ್ನು ಕೂಡಲೆ ಬಂಧಿಸಬೇಕು. ಕೊಲೆಗಡುಕರಿಗೆ ಗಲ್ಲು ಶಿಕ್ಷೆ ವಿಧಿಸಬೇಕು.
ಬೇಡಿಕೆ 2 – ಪಿಎಫ್ಐ, ಎಸ್.ಡಿ.ಪಿ.ಐ ಸಂಘಟನೆ ಸಂಘಟನೆಗಳನ್ನು ನಿಷೇಧಿಸಬೇಕು. ಅಲ್ಲದೆ ಹರ್ಷ ಹತ್ಯೆ ಪ್ರಕರಣವು ಹಿಂದೂ ಕಾರ್ಯಕರ್ತರಲ್ಲಿ ಭಯ ಹುಟ್ಟಿಸುವ ಹುನ್ನಾರವಾಗಿದೆ. ಆದ್ದರಿಂದ ಈ ಕೃತ್ಯವನ್ನು ಭಯೋತ್ಪಾದನಾ ಚಟುವಟಿಕೆ ಎಂದು ಪರಿಗಣಿಸಿ, ಯುಎಪಿಎ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಬೇಕು.
ಬೇಡಿಕೆ 3 – ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆ ಪ್ರಕರಣಗಳನ್ನು ಗೃಹ ಇಲಾಖೆಯ ಆಂತರಿಕ ತನಿಖಾ ಸಂಸ್ಥೆ ಮೂಲಕ ಪ್ರತ್ಯೇಕವಾಗಿ ತನಿಖೆ ನಡೆಸಬೇಕು.
ಬೇಡಿಕೆ 4 – ಶಿವಮೊಗ್ಗದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ದ ಸುಳ್ಳು ಕೇಸ್ ದಾಖಲು ಮಾಡುವುದನ್ನು ನಿಲ್ಲಿಸಬೇಕು.
ನ್ಯಾಯಕ್ಕಾಗಿ ಆಗ್ರಹಿಸಿ ಘೋಷಣೆ
ಜಿಲ್ಲಾಧಿಕಾರಿ ಕಚೇರಿ ಮುಂದೆ ಹಿಂದೂ ಸಂಘಟನೆ ಕಾರ್ಯಕರ್ತರು ನ್ಯಾಯಕ್ಕಾಗಿ ಆಗ್ರಹಿಸಿ ಘೋಷಣೆ ಕೂಗಿದರು. ಸಮಾಜ ಘಾತುಕ ಶಕ್ತಿಗಳಿಗೆ ನೈತಿಕ ಬೆಂಬಲ ಕೊಡುತ್ತಿರುವ ಸರ್ಕಾರದ ನೀತಿ, ಯೋಜನೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅವಕಾಶವಾದಿ ರಾಜಕಾರಣದ ವಿರುದ್ಧವು ಘೋಷಣೆ ಕೂಗಿದರು.
ಡಿಸಿ ಕಚೇರಿ ಮುಂಭಾಗ ರಸ್ತೆ ಬ್ಲಾಕ್
ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರ ಪ್ರತಿಭಟನೆ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಅಹಿತಕರ ಘಟನೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ವಾಹನ ಸಂಚಾರನ್ನು ಕೆಲ ಹೊತ್ತು ಬಂದ್ ಮಾಡಲಾಗಿತ್ತು. ಇನ್ನು, ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು.
ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಜೆ.ಆರ್.ವಾಸುದೇವ್, ಜಿಲ್ಲಾ ಕಾರ್ಯದರ್ಶಿ ನಾರಾಯಣ್ ಜಿ. ವರ್ಣೆಕರ್, ಬಜರಂಗದಳ ಜಿಲ್ಲಾ ಸಂಚಾಲಕ ರಾಜೇಶ್ ಗೌಡ, ಪ್ರಮುಖರಾದ ಸಚಿನ್ ರಾಯ್ಕರ್, ಸತೀಶ್ ಮುಂಚೆಮನೆ, ಸುಧಾಕರ್, ಅಂಕುಶ್ ಸೇರಿದಂತೆ ಹಲವರು ಪ್ರತಿಭಟನೆ ನೇತೃತ್ವ ವಹಿಸಿಕೊಂಡಿದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422