ಜಿಲ್ಲಾಧಿಕಾರಿ ಕಚೇರಿ ಮುಂದೆ ಕಣ್ಣೀರು ಹಾಕಿದ ಹರ್ಷ ತಾಯಿ, ಅಕ್ಕ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 7 ಮಾರ್ಚ್ 2022

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ತಾಯಿ ಇವತ್ತು ಕಣ್ಣೀರು ಹಾಕಿದರು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದರು. ಅಲ್ಲದೆ ಹಿಂದೂ ಸಂಘಟನೆ ಕಾರ್ಯಕರ್ತರಿಗೆ ಘೋಷಣೆ ಕೂಗಿಸಿದರು.

Shimoga Nanjappa Hospital

ಜಿಲ್ಲಾಧಿಕಾರಿ ಕಚೇರಿ ಮುಂದೆ ಇವತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಕೊನೆಯ ಹಂತದಲ್ಲಿ ಮೃತ ಹರ್ಷನ ಕುಟುಂಬದವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದರು.

ಕಣ್ಣೀರು ಹಾಕಿದ ತಾಯಿ, ಸಹೋದರಿ

ಪ್ರತಿಭಟನಾ ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಹರ್ಷನ ತಾಯಿ ಪದ್ಮಾ, ಅಕ್ಕ ಅಶ್ವಿನಿ ಕಣ್ಣೀರು ಹಾಕಿದರು. ಹಿಂದೂ ಸಂಘಟನೆಗಳ ಕಾರ್ಯಕರ್ತರು, ಕುಟುಂಬದವರನ್ನು ಸಮಾಧಾನಪಡಿಸಿದರು. ಈ ವೇಳೆ ಅಲ್ಲಿಗೆ ಬಂದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಈ.ಕಾಂತೇಶ್, ‘ನಾವೆಲ್ಲ ನಿಮ್ಮೊಂದಿಗಿದ್ದೇವೆ. ನಾವೆಲ್ಲ ನಿಮ್ಮ ಮಕ್ಕಳೆ’ ಎಂದು ಸಮಾಧಾನಪಡಿಸಿದರು.

ಘೋಷಣೆ ಕೂಗಿಸಿದ ಹರ್ಷ ತಾಯಿ

ಇನ್ನು, ‘ಘೋಷಣೆ ಕೂಗಿಸಿ ಕಾರ್ಯಕರ್ತರಲ್ಲಿ ಸ್ಪೂರ್ತಿ ತುಂಬಬೇಕು’ ಎಂದು ಕೆ.ಈ.ಕಾಂತೇಶ್ ಅವರು ಹರ್ಷ ತಾಯಿಗೆ ಮನವಿ ಮಾಡಿದರು. ಅದರಂತೆ ಹರ್ಷ ಅವರ ತಾಯಿ ಪದ್ಮಾ ಅವರು ಘೋಷಣೆ ಕೂಗಿಸಿದರು.

ಇದನ್ನೂ ಓದಿ | ಹರ್ಷ ಹತ್ಯೆ ವಿರುದ್ಧ ಶಿವಮೊಗ್ಗದಲ್ಲಿ ಹಿಂದೂ ಸಂಘಟನೆಗಳ ಆಕ್ರೋಶ

ಇದನ್ನೂ ಓದಿ | ಶಿವಮೊಗ್ಗದಲ್ಲಿ ಹಿಂದೂ ಸಂಘಟನೆಗಳ ಪ್ರತಿಭಟನೆ ವೇಳೆ ಜೇನು ದಾಳಿ

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment