ಸಹ್ಯಾದ್ರಿ ಕಾಲೇಜು ವಾಟ್ಸಪ್ ಗ್ರೂಪ್’ನಲ್ಲಿ ಪಾಕಿಸ್ತಾನ ಧ್ವಜದ ಸ್ಟಿಕರ್, ವಿದ್ಯಾರ್ಥಿಗಳ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 ಮಾರ್ಚ್ 2022

ಕಾಲೇಜು ತರಗತಿಯ ವಾಟ್ಸಪ್ ಗ್ರೂಪ್’ನಲ್ಲಿ ಪಾಕಿಸ್ತಾನ ಧ್ವಜದ ಸ್ಟಿಕರ್ ಕಳುಹಿಸಿದ ವಿದ್ಯಾರ್ಥಿಗಳ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Shimoga Nanjappa Hospital

ಸಹ್ಯಾದ್ರಿ ಕಾಲೇಜು ಮುಂದೆ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಯೊಬ್ಬರು ತರಗತಿಯ ವಾಟ್ಸಪ್ ಗ್ರೂಪ್’ನಲ್ಲಿ ಪಾಕಿಸ್ತಾನ ಧ್ವಜದ ಸ್ಟಿಕರ್ ಅಪ್ ಲೋಡ್ ಮಾಡಿದ್ದಾರೆ. ಘಟನೆ ನಡೆದು ಒಂದು ತಿಂಗಳು ಕಳೆದಿದೆ ಎಂದು ಆರೋಪಿಸಿದರು.

ಇದನ್ನೂ ಓದಿ | ಶಿವಮೊಗ್ಗದಲ್ಲಿ ವಿವಾದ ಪೂರ್ವ ಯೋಜಿತ, ವಾಟ್ಸಪ್ ಚಾಟ್ ಬಿಡುಗಡೆ ಮಾಡಿದ ಬಿಜೆಪಿ

ವಾಟ್ಸಪ್’ನಲ್ಲಿ ಪಾಕಿಸ್ತಾನ ಧ್ವಜ ಸ್ಟಿಕರ್ ಹಾಕಿದ್ದರ ವಿರುದ್ಧ ಎಬಿವಿಪಿ ವತಿಯಿಂದ ಪ್ರತಿಭಟನೆ ನಡೆಸಲಾಗಿತ್ತು. ಹೀಗಿದ್ದೂ ಆ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ತಪ್ಪೆಸಗಿದ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಕಾಲೇಜು ಆಡಳಿತ ಮಂಡಳಿ ನಿರ್ಲಕ್ಷ್ಯ ವಹಿಸಿದರೆ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದರು.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 8, 2022

Leave a Comment