SHIVAMOGGA LIVE NEWS | 11 ಮಾರ್ಚ್ 2022
ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆ ಮಾಡಲು ವಿಫಲವಾದ ಮಹಾನಗರ ಪಾಲಿಕೆ ಆಡಳಿತದ ವಿರುದ್ಧ ಕಾಂಗ್ರೆಸ್ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ. ಮೇಯರ್, ಉಪಮೇಯರ್ ಕೊಠಡಿ ಮುಂದೆ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರು ಇವತ್ತು ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿದರು.
ತುಂಗಾ ನದಿ ತೀರದಲ್ಲಿದ್ದರೂ ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ. ಇದನ್ನು ಪರಿಹರಿಸಬೇಕಿದ್ದ ಮಹಾನಗರ ಪಾಲಿಕೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು.
ತ್ರಿಬಲ್ ಎಂಜಿನ್ ಇದ್ದರೂ ನೀರಿಲ್ಲ
ಸುದ್ದಿಗಾರರೊಂದಿಗೆ ಮಾತನಾಡಿದ ಮಹಾನಗರ ಪಾಲಿಕೆ ಸದಸ್ಯ ಹೆಚ್.ಸಿ.ಯೋಗೇಶ್, ಕೇಂದ್ರ, ರಾಜ್ಯ, ನಗರದಲ್ಲಿ ಬಿಜೆಪಿಯ ತ್ರಿಬಲ್ ಎಂಜಿನ್ ಸರ್ಕಾರವಿದೆ. ಆದರೂ ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಲು ಆಗುತ್ತಿಲ್ಲ. 2017ರಲ್ಲಿ 24X7 ಕುಡಿಯುವ ನೀರು ಪೂರೈಕೆ ಯೋಜನೆ ಆರಂಭವಾಗಿದೆ. ಈ ತನಕ ಕಾಮಗಾರಿ ಪೂರ್ಣಗೊಂಡಿಲ್ಲ. ಯೋಜನೆಗೆ ಮೀಸಲಿಟ್ಟ ಹಣದ ಬಲ್ ಆಗುತ್ತಿದೆ ಎಂದು ಆರೋಪಿಸಿದರು.
ಸಭೆ ಕರೆಯಲು ಹಿಂದೇಟು
ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ ಮಾತನಾಡಿ, ಕುಡಿಯುವ ನೀರು ಪೂರೈಕೆ ವಿಚಾರವಾಗಿ ಸಭೆ ಕರೆಯುವಂತೆ ಪದೇ ಪದೇ ಮನವಿ ಮಾಡಿದರೂ ನಿರ್ಲಕ್ಷ ವಹಿಸಲಾಗುತ್ತಿದೆ. ಮೂರು ವರ್ಷದಿಂದ ಪ್ರತ್ಯೇಕ ಸಭೆ ಕರೆಯಲು ಸಾಧ್ಯವಾಗಿಲ್ಲ. ವಾರ್ಡ್’ಗಳಿಗೆ ಅಧಿಕಾರಿಗಳು ಭೇಟಿ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
- ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?
- ಅಡಿಕೆ ಧಾರಣೆ | 20 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
- ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?
- ಶಿವಮೊಗ್ಗ ಜಿಲ್ಲೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು