SHIVAMOGGA LIVE NEWS | 11 ಮಾರ್ಚ್ 2022
ಚಂದ್ರಗುತ್ತಿ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಿ ಜಾತ್ರೆ ವಿಜೃಂಭಣೆಯಿಂದ ನೆರವೇರಿತು. ಇವತ್ತು ಬ್ರಹ್ಮ ರಥೋತ್ಸವ ಇತ್ತು. ದೊಡ್ಡ ಸಂಖ್ಯೆಯ ಭಕ್ತರು ರಥೋತ್ಸವವನ್ನು ಕಣ್ತುಂಬಿಕೊಂಡು ಪುನೀತರಾದರು.
ಸಾಗರ ಉಪ ವಿಭಾಗಾಧಿಕಾರಿ ಡಾ. ಎಲ್.ನಾಗರಾಜ್ ಅವರು ಪೂಜೆ ಸಲ್ಲಿಸಿ, ರಥೋತ್ಸವಕ್ಕೆ ಚಾಲನೆ ನೀಡಿದರು. ಘೋಷಣೆಗಳನ್ನು ಕೂಗುತ್ತ ಭಕ್ತರು ಶ್ರೀ ರೇಣುಕಾಂಬ ದೇವಿಯ ರಥೋತ್ಸವ ನೆರವೇರಿಸಿದರು.
ಸಾವಿರ ಸಾವಿರ ಸಂಖ್ಯೆಯ ಭಕ್ತರು
ಬ್ರಹ್ಮ ರಥೋತ್ಸವ ಕಣ್ತುಂಬಿಕೊಳ್ಳಲು ಸಾವಿರ ಸಾವಿರ ಸಂಖ್ಯೆಯ ಭಕ್ತರು ಚಂದ್ರಗುತ್ತಿಗೆ ಗ್ರಾಮಕ್ಕೆ ಆಗಮಿಸಿದ್ದರು. ಹಾವೇರಿ, ದಾವಣಗೆರೆ, ಬಳ್ಳಾರಿ, ಹಬ್ಬಳ್ಳಿ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಭಕ್ತರು ಬಂದಿದ್ದರು.
ನೈವೇದ್ಯ ಅರ್ಪಿಸಿ ಪೂಜೆ
ದೂರದ ಊರುಗಳಿಂದ ಬಂದಿದ್ದ ಭಕ್ತರು, ದೇವಸ್ಥಾನ ಸಮೀಪದ ಹೊಲ, ಗದ್ದೆಗಳಲ್ಲಿ ಅಡುಗೆ ಮಾಡಿ, ದೇವಿಗೆ ನೈವೇದ್ಯ ಅರ್ಪಿಸಿದರು. ಕುಟುಂಬ ಸಹಿತ ಪೂಜೆ ಸಲ್ಲಿಸಿ ಕೃಪೆಗೆ ಪಾತ್ರರಾದರು.
ರಥೋತ್ಸವ ಹಿನ್ನೆಲೆ ಚಂದ್ರಗುತ್ತಿ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
- ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?
- ಅಡಿಕೆ ಧಾರಣೆ | 20 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
- ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?
- ಶಿವಮೊಗ್ಗ ಜಿಲ್ಲೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು