ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 15 ಮಾರ್ಚ್ 2022
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಕುಟುಂಬ ಸಹಿತವಾಗಿ ‘ದಿ ಕಾಶ್ಮೀರ ಫೈಲ್ಸ್’ ಸಿನಿಮಾ ವೀಕ್ಷಿಸಿದರು. ಬಿಜೆಪಿ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು, ನಾಗರಿಕರು ದೊಡ್ಡ ಸಂಖ್ಯೆಯಲ್ಲಿ ಚಿತ್ರ ವೀಕ್ಷಿಸುತ್ತಿದ್ದಾರೆ.
ಶಿವಮೊಗ್ಗದ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ‘ದಿ ಕಾಶ್ಮೀರ ಫೈಲ್ಸ್’ ಸಿನಿಮಾದ ವಿಶೇಷ ಪ್ರದರ್ಶನ ಆಯೋಜಿಸಲಾಗಿದೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಈ.ಕಾಂತೇಶ್ ಅವರು ಉಚಿತ ಪ್ರದರ್ಶನ ಆಯೋಜಿಸಿದ್ದಾರೆ.
ಚಿತ್ರ ವೀಕ್ಷೆಣೆಗೆ ಜನವೋ ಜನ
ದಿ ಕಾಶ್ಮೀರ ಫೈಲ್ಸ್ ಚಿತ್ರ ವೀಕ್ಷಣೆಗೆ ದೊಡ್ಡ ಸಂಖ್ಯೆಯಲ್ಲಿ ಪ್ರೇಕ್ಷಕರು ಆಗಮಿಸಿದ್ದರು. ಚಿತ್ರಮಂದಿರದಲ್ಲಿ ಸೀಟುಗಳು ಭರ್ತಿ ಆಗಿದ್ದರಿಂದ ಹಲವರು ನಿರಾಸೆಯಿಂದ ಹಿಂತಿರುಗಿದರು. ಈ ಸಂದರ್ಭ ಮಾತನಾಡಿದ ಕೆ.ಈ.ಕಾಂತೇಶ್ ಅವರು, ‘ಶಿವಮೊಗ್ಗ ನಗರದ ಹಲವು ಜನರು ಇವತ್ತು ಚಿತ್ರ ವೀಕ್ಷಣೆ ಮಾಡುತ್ತಿದ್ದಾರೆ. ಅನೇಕ ಜನರಿಗೆ ಸಿನಿಮಾ ನೋಡುವ ಅವಕಾಶ ಸಿಗಲಿಲ್ಲ. ಮತ್ತೆ ಎರಡು ದಿನ ಉಚಿತ ಪ್ರದರ್ಶನ ಆಯೋಜಿಸಲಾಗುತ್ತದೆ’ ಎಂದು ತಿಳಿಸಿದರು.
ಇನ್ನೆರಡು ದಿನ ಉಚಿತ ಪ್ರದರ್ಶನ
ವೀರಭದ್ರೇಶ್ವರ ಚಿತ್ರ ಮಂದಿರದಲ್ಲಿ ಮತ್ತೆ ಎರಡು ದಿನ ‘ದಿ ಕಾಶ್ಮೀರ ಫೈಲ್ಸ್’ ಸಿನಿಮಾದ ಉಚಿತ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ‘ಮಾರ್ಚ್ 17 ಮತ್ತು 18ರಂದು ಸಂಜೆ 5.30ಕ್ಕೆ ಚಿತ್ರ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಆಸಕ್ತರು ಶಿವಮೊಗ್ಗ ನಗರದ ಶಾಸಕರ ಕಚೇರಿ ಮತ್ತು ಬಿಜೆಪಿ ಕಚೇರಿಯಲ್ಲಿ ಉಚಿತ ಟಿಕೆಟ್’ಗಳನ್ನು ಪಡೆದುಕೊಳ್ಳಬಹುದು’ ಎಂದು ಕೆ.ಈ.ಕಾಂತೇಶ್ ಅವರು ತಿಳಿಸಿದರು.
ಶಿವಮೊಗ್ಗದಲ್ಲಿಯೂ ‘ದಿ ಕಾಶ್ಮೀರ ಫೈಲ್ಸ್’ ಚಲನಚಿತ್ರಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422