SHIVAMOGGA LIVE NEWS | 19 ಮಾರ್ಚ್ 2022
ಖಾಸಗಿ ಶಾಲೆಯೊಂದರ ವಸತಿ ನಿಲಯದ ಅಡುಗೆ ಮನೆಯಲ್ಲಿ ಗ್ಯಾಸ್ ಲೀಕ್ ಆಗಿದ್ದು ಕೆಲಕಾಲ ಆತಂಕಕ್ಕೆ ಕಾರಣವಾಗಿತ್ತು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ದೊಡ್ಡ ಅನಾಹುತ ತಪ್ಪಿಸಿದ್ದಾರೆ.
ಶಿವಮೊಗ್ಗದ ಅನುಪಿನಕಟ್ಟೆಯಲ್ಲಿ ಖಾಸಗಿ ಶಾಲೆಯೊಂದರ ವಸತಿ ನಿಲಯದಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಅಡುಗೆ ಮನೆಯಲ್ಲಿ ಬಳಕೆ ಮಾಡುತ್ತಿದ್ದ ಅಡುಗೆ ಅನಿಲ ಸೋರಿಕೆ ಆಗಿದೆ. ಗ್ಯಾಸ್ ವಾಸನೆ ಎಂದು ಗೊತ್ತಾಗುತ್ತಿದ್ದ ಹಾಗೆ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಲಾಗಿತ್ತು.
ಪ್ರಾಣ ಪಣಕ್ಕಿಟ್ಟು ಕಾರ್ಯಾಚರಣೆ
ಅಡುಗೆ ಅನಿಲ ಸೋರಿಕೆಯಿಂದಾಗಿ ಶಾಲೆ ಆವರಣದಲ್ಲಿ ಆತಂಕ ಸೃಷ್ಟಿಯಾಗಿತ್ತು. ಸಣ್ಣದೊಂದು ಯಡವಟ್ಟು ಸಂಭವಿಸಿದ್ದರೂ ದೊಡ್ಡ ಪ್ರಮಾಣದ ಹಾನಿಯಾಗುವ ಸಾದ್ಯತೆ ಇತ್ತು. ಅಗ್ನಿಶಾಮಕ ಸಿಬ್ಬಂದಿ ಪ್ರಾಣವನ್ನು ಪಣಕ್ಕಿಟ್ಟು ಕಾರ್ಯಾಚರಣೆ ನಡೆಸಿ ಅನಿಲ ಸೋರಿಕೆ ತಡೆದಿದ್ದಾರೆ.
ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಅಶೋಕ್ ಕುಮಾರ್, ಠಾಣಾಧಿಕಾರಿ ಪ್ರವೀಣ್ ಕುಮಾರ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
- ಆಯನೂರು ATMನಲ್ಲಿ ಹಣ ಬಿಡಿಸಿದ ರೈತ, 20 ನಿಮಿಷದಲ್ಲೇ ಕಾದಿತ್ತು ಶಾಕ್, ಆಗಿದ್ದೇನು?
- ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿ 3 ದಿನ ಫಲಪುಷ್ಪ ಪ್ರದರ್ಶನ, ಈ ವರ್ಷದ ವಿಶೇಷತೆ ಏನು?
- 2022ರಲ್ಲಿ ಅಪ್ಲೋಡ್ ಆಗಿದ್ದ ವಿಡಿಯೋ, ಶಿವಮೊಗ್ಗದ ಯುವಕನಿಗೆ ಈಗ ಶುರು ಸಂಕಷ್ಟ
- ಅಡಿಕೆ ಧಾರಣೆ | 22 ಜನವರಿ 2025 | ಇವತ್ತು ಯಾವ್ಯಾವ ಅಡಿಕೆ ಎಷ್ಟಿದೆ ರೇಟ್?
- ಸೈನ್ಸ್ ಮೈದಾನ, ಸಂಜೆ ಪಾರ್ಕಿಂಗ್ ಸ್ಥಳಕ್ಕೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ
- ಇನ್ಮುಂದೆ ಕಾಗೋಡು ತಿಮ್ಮಪ್ಪ, ಡಾಕ್ಟರ್ ಕಾಗೋಡು ತಿಮ್ಮಪ್ಪ