ಪ್ರಿಯಕರನ ಮದುವೆ ದಿನವೇ ಪ್ರಿಯತಮೆ ಆತ್ಮಹತ್ಯೆ, ಕಲ್ಯಾಣ ಮಂಟಪದಿಂದ ಮದುಮಗ ನಾಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 ಮಾರ್ಚ್ 2022

ಬೇರೆ ಯುವತಿ ಜೊತೆಗೆ ಪ್ರಿಯಕರ ಮದುವೆ ಆಗುತ್ತಿರುವುದರಿಂದ ಮನನೊಂದು ಪ್ರಿಯತಮೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿಚಾರ ತಿಳಿಯುತ್ತಿದ್ದಂತೆ ಪ್ರಿಯಕರ ಮದುವೆ ಮಂಟಪದಿಂದಲೇ ಪರಾರಿಯಾಗಿದ್ದಾನೆ..

Shimoga Nanjappa Hospital

ಶಿವಮೊಗ್ಗದ ಓ.ಟಿ.ರಸ್ತೆಯ ರೂಪಶ್ರೀ, ಮನೆಯಲ್ಲೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಾಲ್ಕು ಪುಟದ ಡೆತ್ ನೋಟ್ ಬರೆದಿದ್ದು, ಪ್ರಿಯಕರನ ವಿರುದ್ಧ ಆರೋಪ ಮಾಡಿದ್ದಾಳೆ.

ಪ್ರಿಯಕರನ ಮದುವೆ ದಿನವೇ ನೇಣಿಗೆ

ಮುರಳಿ ಎಂಬಾತನನ್ನು ರೂಪಶ್ರೀ ಬಹು ವರ್ಷದಿಂದ ಪ್ರೀತಿಸುತ್ತಿದ್ದಳು. ಶಿವಮೊಗ್ಗದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಮುರಳಿಯ ಮದುವೆ ನಿಶ್ಚಯವಾಗಿತ್ತು. ಮದುವೆ ದಿನವೇ ರೂಪಶ್ರೀ ನೇಣಿಗೆ ಶರಣಾಗಿದ್ದಾರೆ.

ಡೆತ್ ನೋಟ್ ಪತ್ತೆ

ಸಾವಿಗೂ ಮುನ್ನ ರೂಪಶ್ರೀ ಅವರು ಡೆತ್ ನೋಟ್ ಬರೆದಿಟ್ಟಿದ್ದಾರೆ. ಇದು ಪತ್ತೆಯಾಗಿದೆ. ‘ಇಬ್ಬರೂ ಪ್ರೀತಿ ಮಾಡುತ್ತಿದ್ದೆವು. ಮದುವೆ ಆಗಲು ಕೂಡ ನಿರ್ಧಾರ ಮಾಡಿಕೊಂಡಿದ್ದೆವು. ಈಗ ತನ್ನನ್ನು ಬಿಟ್ಟು ಬೇರೊಬ್ಬರ ಜೊತೆಗೆ ಮದುವೆ ಆಗುತ್ತಿದ್ದಾನೆ. ಆ ಕಾರಣಕ್ಕೆ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ರೂಪಶ್ರೀ ಡೆತ್ ನೋಟ್’ನಲ್ಲಿ ಬರೆದಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ಆರೋಪದ ಅಡಿ ಪ್ರಕರಣ ದಾಖಲು ಮಾಡಿದ್ದೇವೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.

ಮದುವೆ ಮನೆಯಿಂದಲೇ ಪರಾರಿ

ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನಿಶ್ಚಯವಾಗಿದ್ದ ಯುವತಿಗೆ ಮುರಳಿ ತಾಳಿ ಕಟ್ಟಿದ್ದಾನೆ. ರೂಪಶ್ರೀ ಆತ್ಮಹತ್ಯೆಯ ವಿಚಾರ ತಿಳಿಯುತ್ತಿದ್ದ ಹಾಗೆ ಕಲ್ಯಾಣ ಮಂಟಪದಿಂದಲೇ ಮುರಳಿ ಪರಾರಿಯಾಗಿದ್ದಾನೆ. ‘ಮುರಳಿಯ ಬಂಧನ ಪ್ರಕ್ರಿಯೆ ನಡೆಯುತ್ತಿದೆ. ಸದ್ಯದಲ್ಲೇ ಆತನನ್ನು ಬಂಧಿಸುತ್ತೇವೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ತಿಳಿಸಿದರು.

ಇಬ್ಬರೂ ಉಪನ್ಯಾಸಕರಾಗಿದ್ದರು

ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ರೂಪಶ್ರೀ ಅತಿಥಿ ಉಪನ್ಯಾಸಕರಾಗಿದ್ದರು. ಪಿ.ಹೆಚ್.ಡಿ ಮಾಡುತ್ತಿದ್ದರು. ಇನ್ನು, ಮುರಳಿ ಕೂಡ ಉಪನ್ಯಾಸಕನಾಗಿದ್ದ. ಖಾಸಗಿ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದ. ಬಹು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳಿದು ಬಂದಿದೆ. ಆದರೆ ಈಚೆಗೆ ರೂಪಶ್ರೀಯನ್ನು ಬಿಟ್ಟು ಮನೆಯಲ್ಲಿ ನಿಶ್ಚಯಿಸಿದ್ದ ಯುವತಿ ಜೊತೆಗೆ ಮುರಳಿ ಮದುವೆ ಆಗಿದ್ದಾನೆ.

ಆತ್ಮಹತ್ಯೆ ಪ್ರಕರಣ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುರಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

JNNCE College VTU ranking

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 20, 2022

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment