ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 ಮಾರ್ಚ್ 2022
ಯಾರೂ ಇಲ್ಲದ ವೇಳೆ ಸಿಮೆಂಟ್ ಶೀಟ್ ತೆಗೆದು ಮನೆಯೊಳಗೆ ಚಿನ್ನ, ಬೆಳ್ಳಿ ಆಭರಣ, ನಗದು ಕಳ್ಳತನ ಮಾಡಲಾಗಿದೆ.
ಶಿವಮೊಗ್ಗದ ಅಣ್ಣಾನಗರದ ದಾದಾಪೀರ್ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ದಾದಾಪೀರ್ ಅವರ ಕುಟುಂಬದವರು ಸಂಬಂಧಿಯ ಮನೆಗೆ ತೆರಳಿದ್ದಾಗ ಕಳ್ಳತನವಾಗಿದೆ.
ವಿಚಾರ ಗೊತ್ತಾಗಿದ್ದು ಹೇಗೆ?
ದಾದಾಪೀರ್ ಅವರ ಕುಟುಂಬದವರು ಸಂಬಂಧಿಯೊಬ್ಬರ ಮನೆಗೆ ತೆರಳಿದ್ದರು. ಪರೀಕ್ಷೆ ಇದ್ದ ಕಾರಣ ಮರುದಿನವೇ ದಾದಾಪೀರ್ ಅವರ ಮಗ ಮನೆಗೆ ಹಿಂತಿರುಗಿದ್ದಾನೆ. ಆಗ ಕಳ್ಳತನದ ವಿಚಾರ ಗೊತ್ತಾಗಿದೆ.
ಇದನ್ನೂ ಓದಿ | ಶಿವಮೊಗ್ಗ KSRTC ಬಸ್ ನಿಲ್ದಾಣಕ್ಕೆ ಲ್ಯಾಪ್ ಟಾಪ್ ಜೊತೆ ಬಂದ ವಿದ್ಯಾರ್ಥಿನಿಗೆ ಶಾಕ್
ಮನೆಯ ಬಾತ್ ರೂಂಗೆ ಹಾಕಿದ್ದ ಸಿಮೆಂಟ್ ಶೀಟ್ ಕಿತ್ತು ತೆಗೆದು ಕಳ್ಳರು ಒಳಗೆ ಪ್ರವೇಶಿಸಿದ್ದಾರೆ. ಬೆಡ್ ರೂಂನಲ್ಲಿದ್ದ ಬೀರುವಿನ ಬಾಗಿಲು ಮೀಟಲಾಗಿದೆ. ಬೀರುವಿನಲ್ಲಿದ್ದ 1.54 ಲಕ್ಷ ರೂ. ಹಣ, 50 ಸಾವಿರ ರೂ. ಬೆಲೆ ಬಾಳುವ ಚಿನ್ನಾಭರಣ, 6 ಸಾವಿರ ಮೌಲ್ಯದ ಬೆಳ್ಳಿ ವಸ್ತುಗಳು ಕಳ್ಳತನವಾಗಿದೆ.
ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





