ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 26 ಮಾರ್ಚ್ 2022
ಗುಂಡು ತಗುಲಿ ನೊಣಬೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕಾಂತರಾಜು ಸಾವನ್ನಪ್ಪಿದೆ ಪ್ರಕರಣ ಸಂಬಂಧ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತನ ಸಹೋದರ ನೀಡಿದ ದೂರಿನ ಅನ್ವಯ ಕೇಸ್ ದಾಖಲು ಮಾಡಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಈ ನಡುವೆ ಮೃತದೇಹವನ್ನು ಶಿವಮೊಗ್ಗಕ್ಕೆ ರವಾನಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕಾಂತರಾಜು (40) ಅವರಿಗೆ ಶಿರಿಗಾರುವಿನಿಂದ ಹೊಸ್ಕೇರಿ ಮತ್ತು ಅತ್ತಿಗಾರುಗೆ ಹೋಗುವ ರಸ್ತೆಯ ಪಕ್ಕದಲ್ಲಿ ಗುಂಡೇಟು ಬಿದ್ದಿದೆ. ಇದರ ಪರಿಣಾಮ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸಹೋದರನಿಂದ ದೂರು
ಘಟನೆ ಸಂಬಂಧ ಕಾಂತರಾಜು ಅವರ ಸಹೋದರ ತೀರ್ಥಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ‘ಇವರಿಗೆ ಯಾವ ಕಾರಣಕ್ಕೆ ಗುಂಡೇಟು ತಗುಲಿತು, ಯಾರು ಗುಂಡು ಹಾರಿಸಿದ್ದಾರೆ ಎಂಬುದರ ಬಗ್ಗೆ ಅನುಮಾನವಿರುತ್ತದೆ’ ಎಂದು ದೂರಿನಲ್ಲಿ ಹೇಳಿರುವುದಾಗಿ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮೃತದೇಹ ಶಿವಮೊಗ್ಗಕ್ಕೆ ರವಾನೆ
ಮತ್ತೊಂದೆಡೆ ಬಿಜೆಪಿ ಮುಖಂಡ ಕಾಂತರಾಜು ಅವರ ಮೃತದೇಹವನ್ನು ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಇರುವ ಶವಾಗಾರದಲ್ಲಿ ಮೃತದೇಹ ಇರಿಸಲಾಗಿದೆ. ಗುಂಡೇಟು ತಗುಲಿರುವುದರಿಂದ ಸೂಕ್ಷ್ಮವಾಗಿ ಮರಣೋತ್ತರ ಪರೀಕ್ಷೆ ನಡೆಸಬೇಕಾಗುತ್ತದೆ. ಅದರ ವಿಡಿಯೋ ಚಿತ್ರೀಕರಣವನ್ನು ಮಾಡಬೇಕಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ | ತೀರ್ಥಹಳ್ಳಿಯಲ್ಲಿ ಗುಂಡು ತಗುಲಿ ಬಿಜೆಪಿ ಮುಖಂಡ ಸಾವು, ಆಸ್ಪತ್ರೆಗೆ ಗೃಹ ಸಚಿವರ ದೌಡು
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200