ಊಟ ಮುಗಿಸಿ ಮನೆಯಿಂದ ಹೊರ ಬಂದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ

SHIVAMOGGA LIVE NEWS | 28 ಮಾರ್ಚ್ 2022 (ಈ ಸುದ್ದಿಯನ್ನು ಇನ್ನು 58 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ರಾತ್ರಿ ಊಟ ಮುಗಿಸಿ ಹೊರ ಬಂದ ಯುವಕನ ಮೇಲೆ ಗುಂಪೊಂದು ದಾಳಿ ಮಾಡಿದೆ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಲು ಮುಂದಾಗಿದೆ ಎಂದು ಆರೋಪಿಸಲಾಗಿದೆ. ಸ್ಥಳೀಯರು ಯುವಕನನ್ನು ರಕ್ಷಣೆ ಮಾಡಿದ್ದಾರೆ. ಘಟನೆ ಸಂಬಂಧ ಹತ್ತು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ಸಂತೋಷ್ (23) ಎಂಬಾತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಭದ್ರಾವತಿಯ ಹೊಸಬುಳ್ಳಾಪುರದಲ್ಲಿ ಘಟನೆ ಸಂಭವಿಸಿದೆ.

ಏನಿದು ಪ್ರಕರಣ?

ಹೊಸಬುಳ್ಳಾಪುರದ ಸಂತೋಷ್ ರಾತ್ರಿ ಊಟ ಮುಗಿಸಿ ಮನೆಯಿಂದ ಹೊರ ಬಂದಿದ್ದಾನೆ. ಈ ವೇಳೆ ಕಾಕಾ ಅಂಗಡಿ ಸರ್ಕಲ್’ನಲ್ಲಿ ಕೆಲವು ಯುವಕರು ಹುಟ್ಟುಹಬ್ಬ ಆಚರಣೆ ಮಾಡುತ್ತಿದ್ದರು. ಸಂತೋಷ್ ಅತ್ತ ತೆರಳಿದ್ದಾನೆ.

ಸಂತೋಷನನ್ನು ಗಮನಿಸಿದ ಯುವಕರು, ಆತನ ವಿರುದ್ಧ ದಾಳಿ ನಡೆಸಿದ್ದಾರೆ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಕೊಲ್ಲುವ ಉದ್ದೇಶದಿಂದಲೆ ದಾಳಿ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಗಾಯಗೊಂಡಿದ್ದ ಸಂತೋಷ್ ಜೋರಾಗಿ ಕೂಗಿಕೊಂಡಿದ್ದರಿಂದ ಸ್ಥಳೀಯರು ಮನೆಯಿಂದ ಹೊರ ಬಂದಿದ್ದಾರೆ. ಜನ ಸೇರಿದ್ದರಿಂದ ಯುವಕರ ಗುಂಪು ಎರಡು ಕಾರು, ಒಂದು ಬೈಕಿನಲ್ಲಿ ಪರಾರಿಯಾಗಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ

ಘಟನೆ ಸಂಬಂಧ ರಾಜ, ಚೇತನ್, ಅಜಿತ್, ಜೀವಾ, ಭರತ, ರವಿ, ಪವನ, ಪ್ರಜ್ವಲ್, ಸಂತೋಷ, ಮದನ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಭದ್ರಾವತಿಯ ಪೇಪರ್ ಟೌನ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Shimoga Nanjappa Hospital

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

crime name image

Leave a Comment