ಶಿವಮೊಗ್ಗದಲ್ಲಿ ಬೀದಿಗಿಳಿದ ಕಾರ್ಮಿಕ ಸಂಘಟನೆಗಳು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 30 ಮಾರ್ಚ್ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ “ಜನರನ್ನು ಉಳಿಸಿ ದೇಶವನ್ನು ಉಳಿಸಿ” ಎಂಬ ಘೋಷವಾಕ್ಯದೊಂದಿಗೆ  ಶಿವಮೊಗ್ಗದಲ್ಲಿ ಬೃಹತ್ ಮೆರವಣಿಗೆ ನಡೆಸಲಾಯಿತು. ನಂತರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

AITUC protest

ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು. ಖಾಸಗೀಕರಣ ಬೇಡ. ಎಲ್ಲಾ ಶ್ರಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು, ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸಬೇಕು. ಹಳೆ ಪಿಂಚಣಿ ಯೋಜನೆ ಜಾರಿಯಾಗಬೇಕು ಸೇರಿದಂತೆ ಸುಮಾರು 12 ಕ್ಕೂ ಹೆಚ್ಚು ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು.

ಜನರ ಹಕ್ಕುಗಳು ಮತ್ತು ಜೀವನೋಪಾಯಗಳನ್ನು ಉಳಿಸಲು ಹಾಗೂ ವಿದೇಶಿ ಕಾರ್ಪೊರೇಟ್ ಸಂಸ್ಥೆಗಳ ಓಡಿಸಲು ದೇಶದ ಅರ್ಥ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ, ರೈತ ವಿರೋಧಿ, ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಾ ಕಾರ್ಪೊರೇಟ್ ಪರವಾಗಿದೆ. ಈ ದೇಶವನ್ನು ವಿನಾಶದಿಂದ ತಪ್ಪಿಸಬೇಕಾಗಿದೆ. ಏರುತ್ತಿರುವ ಬೆಲೆ ಇಳಿಯಬೇಕು. ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಬೇಕು. ರಕ್ಷಣೆ ಮತ್ತು ವಿಮಾ ಸೌಲಭ್ಯ ಸಿಗಬೇಕು ಎಂದು ಆಗ್ರಹಿಸಿದರು.

ಅಕ್ಷರ ದಾಸೋಹ ನೌಕರರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಕೇಂದ್ರ ಸರ್ಕಾರ ಕಡಿತ ಮಾಡಿರುವ ಶೇ. 40ರ ಅನುದಾನ ನೀಡಬೇಕು. ಕನಿಷ್ಠ 24 ಸಾವಿರ ವೇತನ ನೀಡಬೇಕು. ಅಂಗನವಾಡಿಗಳಲ್ಲಿ ಎಲ್.ಕೆ.ಜಿ. ಯು.ಕೆ.ಜಿ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.

ಸಿಐಟಿಯು, ಎಐಸಿಸಿಟಿಯು, ಬಿ.ಎಸ್.ಎನ್.ಎಲ್. ಎಂಪ್ಲಾಯಿಸ್ ಯೂನಿಯನ್, ಗ್ರಾಮ ಪಂಚಾಯಿತಿ ನೌಕರರ ಸಂಘ, ಅಕ್ಷರ ದಾಸೋಹ, ಅಂಗನವಾಡಿ ನೌಕರರ ಸಂಘ ಸೇರಿದಂತೆ ಸುಮಾರು 11 ಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು. ಕಾರ್ಮಿಕ ನಾಯಕ ಡಿ.ಸಿ.ಮಾಯಣ್ಣ, ಅನಂತರಾಂ, ಹನುಮಮ್ಮ, ತುಳಸಿಪ್ರಭಾ, ಭಾಗ್ಯ, ಗೀತಾ, ಜಯಮ್ಮ, ತಾರಾ, ಅಶ್ವಿನಿ, ಪುಷ್ಪಾ, ಸೂರ್ಯಕಲಾ, ನಾಣಯ್ಯ, ವೇಲು ಇತರರಿದ್ದರು.

ಪ್ರತಿಭಟನೆಯ ಫೋಟೊಗಳು

CITU Workers

AITUC protest

AITUC Protest

Nanjappa Hospital Shimoga

Asha Workers

Asha Workers

Asha Workers

Shimoga Nanjappa Hospital

Asha Workers

Asha Workers

Asha Workers

Asha Workers

Insurance Employees

shimoga nanjappa hospital

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment