ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 4 ಏಪ್ರಿಲ್ 2022
ಪೋಕ್ಸೊ ಪ್ರಕರಣದ ಆರೋಪಿ ಮೇಲೆ ಸಾಕ್ಷಿ ಹೇಳಲು ಬಂದಿದ್ದ ಸಂತ್ರಸ್ತೆ ಕುಟುಂಬದವರು ನ್ಯಾಯಾಲಯದ ಆವರಣದಲ್ಲೇ ಹಲ್ಲೆ ಮಾಡಿದ್ದಾರೆ.
ಪೋಕ್ಸೊ ಪ್ರಕರಣದಲ್ಲಿ ಆರೋಪಿ ಕೋರ್ಟ್ಗೆ ಹಾಜರಾಗಿ ವಿಚಾರಣೆ ಮುಗಿಸಿಕೊಂಡು ನ್ಯಾಯಾಲಯದ ಹಿಂಭಾಗದಿಂದ ತೆರಳುತ್ತಿದ್ದಾಗ ನಾಲ್ವರು ಹಲ್ಲೆ ನಡೆಸಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ಮೇಲೆ ಎರಡು ವರ್ಷಗಳ ಹಿಂದೆ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಅದು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ.
ವಿಚಾರಣೆಗೆ ಹಾಜರಾಗಲು ಮೈಸೂರಿನಿಂದ ಬಂದಿದ್ದ ಆರೋಪಿ ಮೇಲೆ ಹಲ್ಲೆ ಮಾಡಿದ್ದು ಬಿಡಿಸಲು ಬಂದ ಆರೋಪಿ ಪರ ವಕೀಲರನ್ನೂ ತಳ್ಳಿದ ಆರೋಪ ಕೇಳಿಬಂದಿದೆ. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು















