ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ಮಧ್ಯರಾತ್ರಿ ಅಂಗಡಿಗೆ ಬೆಂಕಿ ಹಚ್ಚಲು ಯತ್ನ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 6 ಏಪ್ರಿಲ್ 2022

ನಡುರಾತ್ರಿ ಅಂಗಡಿಗಳಿಗೆ ಬೆಂಕಿ ಹಚ್ಚಲು ಕಿಡಿಗೇಡಿಗಳು ವಿಫಲ ಯತ್ನ ನಡೆಸಿದ್ದಾರೆ. ಗಸ್ತು ಪೊಲೀಸರ ಸಮಯ ಪ್ರಜ್ಞೆಯಿಂದಾಗಿ ಅನಾಹುತ ತಪ್ಪಿದಂತಾಗಿದೆ. ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗ ಬೈಪಾಸ್ ರಸ್ತೆಯ ವಾದಿ-ಎ-ಹುದಾ ಬಡಾವಣೆ ಬಳಿ ಘಟನೆ ಸಂಭವಿಸಿದೆ. ಅಜ್ಮಲ್ ಅಹಮದ್ ಎಂಬುವವರಿಗೆ ಸೇರಿದ ಹಣ್ಣಿನ ಅಂಗಡಿಗೆ ಬೆಂಕಿ ಹಚ್ಚಲು ಕಿಡಿಗೇಡಿಗಳು ಯತ್ನಿಸಿದ್ದಾರೆ.

ಬೆಂಕಿ ಹಚ್ಚಿದ ಕಿಡಿಗೇಡಿಗಳು

ಸಂಬಂಧಿಯೊಬ್ಬರ ಜಾಗದಲ್ಲಿ ಹಲವು ವರ್ಷದಿಂದ ಅಜ್ಮಲ್ ಅಹಮದ್ ಅವರು ಶೆಡ್ ನಿರ್ಮಿಸಿ, ಹಣ್ಣಿನ ಅಂಗಡಿ ನಡೆಸುತ್ತಿದ್ದಾರೆ. ಏಪ್ರಿಲ್ 4ರ ಮಧ್ಯರಾತ್ರಿ 2 ಗಂಟೆ ಹೊತ್ತಿಗೆ ಹಣ್ಣಿನ ಅಂಗಡಿಯ ಹಿಂಭಾಗ ಬೆಂಕಿ ಹಚ್ಚಲಾಗಿದೆ.

ಬೆಂಕಿಯ ಜ್ವಾಲೆಗೆ ಹಣ್ಣಿನ ಅಂಗಡಿಯ ಪಕ್ಕದ ಗುಜರಿ ಅಂಗಡಿ ಟಾರ್ಪಲ್’ಗೆ ಸುಟ್ಟು ಹೋಗಿದೆ. ಇನ್ನು, ಅಜ್ಮಲ್ ಅಹಮದ್ ಅವರ ಅಂಗಡಿ ಪಕ್ಕದಲ್ಲಿ ಕುರಂ ಎಂಬುವವರಿಗೆ ಸೇರಿದ ಅಂಗಡಿಗೂ ಬೆಂಕಿ ಹಚ್ಚಲಾಗಿದೆ.

ಗಸ್ತು ಪೊಲೀಸರ ಸಮಯ ಪ್ರಜ್ಞೆ

ನಡುರಾತ್ರಿ ಗಸ್ತು ತಿರುಗುತ್ತಿದ್ದ ಪೊಲೀಸರು ಬೆಂಕಿ ಹೊತ್ತುಕೊಂಡಿರುವುದನ್ನು ಗಮನಿಸಿದ್ದಾರೆ. ಕೂಡಲೆ ಬೆಂಕಿ ನಂದಿಸಿದ್ದಾರೆ. ನೆರೆಹೊರೆಯ ಜನರು ಪೊಲೀಸರಿಗೆ ನೆರವಾಗಿದ್ದಾರೆ. ಇದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಅಂಗಡಿಗೆ ಸ್ವಲ್ಪ ಹಾನಿಯಾಗಿದೆ. ವಿಚಾರ ತಿಳಿದು ಅಂಗಡಿ ಮಾಲೀಕರು ಕೂಡ ಸ್ಥಳಕ್ಕೆ ದೌಡಾಯಿಸಿದ್ದಾರೆ.

ಬೆಂಕಿ ಹಚ್ಚಿದ ಕಿಡಿಗೇಡಿಗಳ ವಿರುದ್ಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Shimoga Nanjappa Hospital

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

Leave a Comment