SHIVAMOGGA LIVE NEWS |Tirupati Chennai Train | 8 ಏಪ್ರಿಲ್ 2022
ಕರೊನಾ ಕಾರಣದಿಂದ ಸ್ಥಗಿತಗೊಂಡಿದ್ದ ಶಿವಮೊಗ್ಗ – ರೇಣಿಗುಂಟಾ(ತಿರುಪತಿ) ಮಾರ್ಗದ ರೈಲು ಸಂಚಾರ ಪುನಾರಂಭವಾಗಲಿದೆ. ಆದರೆ ಈ ಭಾರಿ ರೈಲು ಮಾರ್ಗ ಮತ್ತು ಸಮಯ ಬದಲಾವಣೆ ಮಾಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ – ರೇಣಿಗುಂಟಾ (ತಿರುಪತಿ) ರೈಲಿನ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ. ಈ ರೈಲು ಶಿವಮೊಗ್ಗ – ತಿರುಪತಿ – ಚೆನ್ನೈ ಮಾರ್ಗದಲ್ಲಿ ಸಂಚರಿಸಲಿದೆ. ಏಪ್ರಿಲ್ 17ರಿಂದ ಈ ರೈಲು ಸಂಚಾರ ಆರಂಭಿಸಲಿದೆ.
ವಾರಕ್ಕೆ ಎರಡು ದಿನ ಸಂಚಾರ
ಶಿವಮೊಗ್ಗ – ರೇಣಿಗುಂಟ – ಚೆನ್ನೈ ರೈಲು ವಾರದಲ್ಲಿ ಎರಡು ದಿನ ಸಂಚಾರ ಮಾಡಲಿದೆ. ಶಿವಮೊಗ್ಗದಿಂದ ಭಾನುವಾರ ಮತ್ತು ಮಂಗಳವಾರ ಸಂಚಾರ ಮಾಡಲಿದೆ. ಚೆನ್ನೈನಿಂದ ಪ್ರತಿ ಸೋಮವಾರ ಮತ್ತು ಬುಧವಾರ ಸಂಚಾರ ಮಾಡಲಿದೆ.
ರೈಲಿನ ಸಮಯವೇನು?
ಶಿವಮೊಗ್ಗದಿಂದ ರಾತ್ರಿ 7 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 8.20ಕ್ಕೆ ರೇಣಿಗುಂಟ ತಲುಪಲಿದೆ. ಬೆಳಗ್ಗೆ 11.10 ಕ್ಕೆ ಚೆನ್ನೈ ತಲುಪುತ್ತದೆ. ಅದೇ ದಿನ ಚೆನ್ನೈನಿಂದ ಮಧ್ಯಾಹ್ನ 3.50ಕ್ಕೆ ಹೊರಟು ರೇಣಿಗುಂಟಕ್ಕೆ ಸಂಜೆ 6.10 ಕ್ಕೆ ತಲುಪಿ ಮರುದಿನ ಬೆಳಿಗ್ಗೆ 7.55ಕ್ಕೆ ಶಿವಮೊಗ್ಗವನ್ನು ತಲುಪಲಿದೆ ಎಂದು ಸಂಸದ ರಾಘವೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಲ್ಲೆಲ್ಲಿ ನಿಲುಗಡೆ ಇದೆ?
ಈ ರೈಲು ಭದ್ರಾವತಿ, ತರೀಕೆರೆ, ಬೀರೂರು, ಅಜ್ಜಂಪುರ, ಹೊಸದುರ್ಗ, ಚಿತ್ರದುರ್ಗ, ಚಳ್ಳಕೆರೆ, ಮೊಳಕಾಲ್ಮೂರು, ರಾಯದುರ್ಗ, ಬಳ್ಳಾರಿ, ಗುಂತಕಲ್, ತಾಡಪತ್ರಿ, ಗುತ್ತಿ, ಯರಗುಂಟ, ಕಡಪ, ರಾಯಪೇಟ, ರೇಣಿಗುಂಟ (ತಿರುಪತಿ), ಅರಕೋಣಂ, ಪರಂಬೂರ್ ರೈಲು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ.
ಸಮಯ ಬದಲಾವಣೆಗೆ ಕಾರಣವೇನು?
ಶಿವಮೊಗ್ಗ – ರೇಣಿಗುಂಟಾ (ತಿರುಪತಿ) ಹಾಗೂ ಶಿವಮೊಗ್ಗ-ಬೆಂಗಳೂರು-ಚೆನ್ನೈ ಎಕ್ಸಪ್ರೆಸ್ ರೈಲುಗಳು ವಾರಕ್ಕೆ ಎರಡು ದಿನ ಸಂಚಾರ ಆರಂಭಿಸಿತ್ತು. ಶಿವಮೊಗ್ಗದಿಂದ ಬೆಳಗ್ಗೆ ಹೊರಡುತ್ತಿದ್ದ ರೈಲು ತಿರುಪತಿ ತಲುಪಿ ಮತ್ತೆ ಅರ್ಧ ಗಂಟೆಯಲ್ಲಿ ಶಿವಮೊಗ್ಗದೆಡೆಗೆ ಪ್ರಯಾಣ ಬೆಳೆಸುತ್ತಿತ್ತು. ಇದರಿಂದ ಯಾತ್ರಾರ್ಥಿಗಳಿಗೆ ಹೆಚ್ಚು ಅನುಕೂಲವಾಗಿರಲಿಲ್ಲ. ಹೀಗಾಗಿ, ರೈಲ್ವೆ ಸಚಿವರ ಮೇಲೆ ಒತ್ತಡ ಹೇರಿದ ಪರಿಣಾಮವಾಗಿ ಈಗ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.
ದರ್ಶನ ಮುಗಿಸಿ ವಾಪಸ್
ಮಲೆನಾಡು, ಕರಾವಳಿ ಹಾಗೂ ಶಿವಮೊಗ್ಗ ಭಾಗದ ಜನರು ರೇಣಿಗುಂಟಕ್ಕೆ ಮುಂಜಾನೆ ತಲುಪಬಹುದು. ಸಂಜೆ ವೇಳೆಗೆ ತಿರುಪತಿಯಲ್ಲಿ ದೇವರ ದರ್ಶನ ಪಡೆದು ಅದೇ ದಿನ ರಾತ್ರಿ ಶಿವಮೊಗ್ಗಕ್ಕೆ ಮರುಪ್ರಯಾಣ ಆರಂಭಿಸಲು ಈ ಬದಲಾದ ಸಮಯ ನೆರವಾಗಲಿದೆ. ಈ ಮೊದಲಿನ ರೈಲು ಸೇವೆಯು ಶಿವಮೊಗ್ಗದಿಂದ ಮುಂಜಾನೆ ತನ್ನ ಪ್ರಯಾಣವನ್ನು ಆರಂಭಿಸುತ್ತಿದ್ದರಿಂದ ಶಿವಮೊಗ್ಗದಿಂದ ತಿರುಪತಿಗೆ ತೆರಳಲು ಬಯಸುತ್ತಿದ್ದ ಯಾತ್ರಾರ್ಥಿಗಳು ಇಡೀ ದಿನವನ್ನು ರೈಲಿನಲ್ಲಿ ಕಳೆಯಬೇಕಾಗಿತ್ತು. ಬದಲಾದ ಸಮಯದಲ್ಲಿ ರಾತ್ರಿಯ ಪ್ರಯಾಣದ ಮೂಲಕ ತಿರುಪತಿಯನ್ನು ತಲುಪಬಹುದಾಗಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ.
ಇದನ್ನೂ ಓದಿ | ಶಿವಮೊಗ್ಗ – ಬೆಂಗಳೂರು ರೈಲ್ವೆ ಟೈಮಿಂಗ್ಸ್, ಯಾವ ರೈಲು ಎಷ್ಟೊತ್ತಿಗೆ ಹೊರಡುತ್ತೆ?
Tirupati Chennai Train |
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200