SHIVAMOGGA LIVE NEWS | POLITICS | 8 ಏಪ್ರಿಲ್ 2022
ಜೆಡಿಎಸ್ ಜಿಲ್ಲಾಧ್ಯಕ್ಷರಾಗಿದ್ದ ಎಂ.ಶ್ರೀಕಾಂತ್, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್, ಶಿಕಾರಿಪುರದ ವಿ.ಪಿ.ಬಳಿಗಾರ್ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗುವ ನಿರೀಕ್ಷೆ ಇದೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದರು.
ಸೊರಬದಲ್ಲಿ ಬ್ಲಾಕ್ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಮಧು ಬಂಗಾರಪ್ಪ, ಇವರೆಲ್ಲ ಕಾಂಗ್ರೆಸ್ ಸೇರ್ಪಡೆಯಾದರೆ ಜಿಲ್ಲೆಯಲ್ಲಿ ಪಕ್ಷ ಮತ್ತಷ್ಟು ಬಲಗೊಳ್ಳಲಿದೆ ಎಂದರು.
ಹಿಂದುತ್ವದ ಹೆಸರಿನಲ್ಲಿ ಕಂದಕ
ಹಿಂದುತ್ವದ ಹೆಸರಿನಲ್ಲಿ ಬಿಜೆಪಿ ಕಂದಕ ಸೃಷ್ಟಿಸುತ್ತಿದೆ. ಹಿಜಾಬ್, ಹಲಾಲ್ ಕಟ್ ಇಂತಹ ವಿಷಯಗಳನ್ನು ಮುಂದಿಟ್ಟುಕೊಂಡು ಬಿಜೆಪಿ ರಾಜಕೀಯ ಮಾಡುತ್ತಿದೆ. ಅಭಿವೃದ್ಧಿ ಹೆಸರಿನಲ್ಲಿ ಚುನಾವಣೆಗೆ ಹೋದರೆ ಬಿಜೆಪಿಗೆ ನಾಲ್ಕು ಮತಗಳು ಬೀಳುವುದಿಲ್ಲ. ಬಜರಂಗದಳ, ಸಂಘ ಪರಿವಾರದ ಸಂಘಟನೆಗಳು ಬೆಲೆ ಏರಿಕೆ, ರೈತರ ಸಮಸ್ಯೆಗಳ ಕುರಿತು ಹೋರಾಟ ನಡೆಸುವುದಿಲ್ಲ. ಜನರ ಸಮಸ್ಯೆಗೂ ಸ್ಪಂದಿಸುತ್ತಿಲ್ಲ ಎಂದು ಮಧು ಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಸಾವಿನ ಮನೆಯಲ್ಲೂ ರಾಜಕೀಯ
ಪೆಟ್ರೋಲ್, ಡಿಸೇಲ್, ಗ್ಯಾಸ್, ವಿದ್ಯುತ್ ದರ ಏರಿಕೆ, ಅಗತ್ಯ ವಸ್ತುಗಳ ಬೆಲೆ ಗಗನಮುಖಿ ಆಗಿದೆ. ಈ ಹಿಂದೆ ಕೊಂಚ ಬೆಲೆ ಏರಿಕೆಯಾದರೂ ಬೀದಿಗಿಳಿಯುತ್ತಿದ್ದ ಬಿಜೆಪಿಯುವರು ಈಗೆಲ್ಲಿದ್ದಾರೆ. ವೈಯಕ್ತಿಕ ವಿಚಾರಗಳು, ಸಾವು, ನೋವುಗಳಿಗೆ ಧರ್ಮದ ಬಣ್ಣ ಹಚ್ಚಿ ಪ್ರಚಾರ ಪಡೆಯುವಲ್ಲಿ ಬಿಜೆಪಿಯವರು ನಿಸ್ಸೀಮರಾಗಿದ್ದಾರೆ. ಸಾವಿನ ಮನೆಯಲ್ಲೂ ರಾಜಕಾರಣ ಮಾಡುತ್ತಾರೆ ಎಂದು ಮಧು ಬಂಗಾರಪ್ಪ ಟೀಕಿಸಿದರು.
ಡಿಜಿಟಲ್ ಸದಸ್ಯತ್ವಕ್ಕೆ ಉತ್ತಮ ಸ್ಪಂದನೆ
ಕಾಂಗ್ರೆಸ ಪಕ್ಷದ ಡಿಜಿಟಲ್ ಸದಸ್ಯತ್ವಕ್ಕೆ ಸೊರಬ ತಾಲೂಕಿನಲ್ಲಿ ಉತ್ತಮ ಸ್ಪಂದನೆ ಸಿಗುತ್ತಿದೆ. ಈಗಾಗಲೇ 37 ಸಾವಿರ ಜನರು ಸದಸ್ಯತ್ವ ಪಡೆದುಕೊಂಡಿದ್ದಾರೆ. 60 ಸಾವಿರಕ್ಕೂ ಅಧಿಕ ಸದಸ್ಯರನ್ನು ಮಾಡುವ ಗುರಿ ಹೊಂದಲಾಗಿದೆ. ಪಕ್ಷವನ್ನು ತಳಮಟ್ಟದಿಂದ ಸಂಘಟನೆ ಮಾಡಲಾಗುತ್ತದೆ ಎಂದು ಮಧ ಬಂಗಾರಪ್ಪ ತಿಳಿಸಿದರು.
ಸೊರಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣಪ್ಪ ಹಾಲಘಟ್ಟ ಸೇರಿದಂತೆ ಹಲವರು ಸಭೆಯಲ್ಲಿ ಉಪಸ್ಥಿತರಿದ್ದರು.
POLITICS
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200