ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | SHIMOGA | 14 ಏಪ್ರಿಲ್ 2022
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಕೆ.ಎಸ್.ಈಶ್ವರಪ್ಪ ಬಂಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಚಿವ ಈಶ್ವರಪ್ಪ ಮನೆಗೆ ಮುತ್ತಿಗೆ ಯತ್ನ ನಡೆಯಿತು.
ಮಲ್ಲೇಶ್ವರ ನಗರದಲ್ಲಿರುವ ಸಚಿವ ಕೆ.ಎಸ್.ಈಶ್ವರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದರು.
ರೈಲ್ವೆ ಗೇಟ್ ಬಳಿ ಬ್ಯಾರಿಕೇಡ್
ಮಲ್ಲೇಶ್ವರ ನಗರ ರಸ್ತೆಯ ರೈಲ್ವೆ ಗೇಟ್ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಕೈಗೊಂಡಿದ್ದರು. ಮುತ್ತಿಗೆ ಹಾಕಲು ಬಂದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರನ್ನು ರೈಲ್ವೆ ಗೇಟ್ ಬಳಿ ತಡೆದು ನಿಲ್ಲಿಸಿದರು. ಈ ವೇಳೆ ಬ್ಯಾರಿಕೇಡ್ ಹಾರಿ ಮುಂದೆ ಹೋಗಲು ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದರು. ಹಾಗಾಗಿ ನೂಕಾಟ ತಳ್ಳಾಟ ಉಂಟಾಯಿತು.
ಕಾಂಗ್ರೆಸ್ ಕಾರ್ಯಕರ್ತರ ಬಂಧನ
ಕೆಲ ಹೊತ್ತು ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದ್ದರಿಂದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಮುತ್ತಿಗೆ ಯತ್ನ ನಡೆಸಲಾಯಿತು.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು















