ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | MINISTER | 22 ಏಪ್ರಿಲ್ 2022
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಶಾರದಾ ಪೂರ್ಯಾನಾಯ್ಕ್ ಅವರನ್ನು ಗೆಲ್ಲಿಸಿ ಕಳುಹಿಸಿ. ಜೆಡಿಎಸ್ ಸರ್ಕಾರ ಬಂದರೆ ರಾಜ್ಯಕ್ಕೆ ಒಬ್ಬ ಉತ್ತಮ ಸಚಿವೆ ಸಿಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಶಿವಮೊಗ್ಗ ತಾಲೂಕು ಕೂಡ್ಲಿಯಲ್ಲಿ ಜನತಾ ಜಲಧಾರೆ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ಜೆಡಿಎಸ್ ಪಕ್ಷ 120 ಸೀಟು ಗೆಲ್ಲಬೇಕು ಅಂದುಕೊಂಡಿದ್ದೇವೆ. ಅದಕ್ಕಾಗಿ ಈ ಭಾಗದಿಂದ ಶಾರದಾ ಪೂರ್ಯನಾಯ್ಕ್ ಅವರನ್ನು ಗೆಲ್ಲಿಸಿ ಕಳುಹಿಸಿ. ರಾಜ್ಯಕ್ಕೆ ಉತ್ತಮ ಮಹಿಳಾ ಸಚಿವರು (MINISTER) ಸಿಗಲಿದ್ದಾರೆ ಎಂದು ತಿಳಿಸಿದರು.
ಪುಣ್ಯಕೋಟಿಯಂತ ವ್ಯಕ್ತಿತ್ವ
ಶಾರದಾ ಪೂರ್ಯಾನಾಯ್ಕ್ ಅವರದ್ದು ಪುಣ್ಯಕೋಟಿ ಕಥೆಯಲ್ಲಿನ ಹಸುವಿನಂತ ವ್ಯಕ್ತಿತ್ವ. ಮುಂದೆ ಬಂದರೆ ಹಾಯಬೇಡಿ, ಹಿಂದೆ ಬಂದರೆ ಒದೆಯಬೇಡಿ ಅನ್ನುವ ವ್ಯಕ್ತಿತ್ವ. ಕಳೆದ ಭಾರಿ ಚುನಾವಣೆಯಲ್ಲಿ ಸೋತಿದ್ದಾರೆ. ಈ ಭಾಗದ ಸಾವಿರಾರು ಕುಟುಂಬಗಳು ಇವರ ಸೋಲಿಗೆ ಕಣ್ಣೀರು ಹಾಕಿವೆ ಎಂದು ಕುಮಾರಸ್ವಾಮಿ ತಿಳಿಸಿದರು.
ಶಾಸಕರಾಗಿದ್ದಾಗ ಹಣ ಮಾಡಲಿಲ್ಲ. ಜನರ ಪ್ರೀತಿ ಸಂಪಾದಿಸಿದ್ದಾರೆ. ಆ ಪ್ರೀತಿಯನ್ನು ಉಳಿಸಿಕೊಳ್ಳಲು ಅವರೊಂದಿಗೆ ಕೈ ಜೋಡಿಸಿ ಎಂದು ಕುಮಾರಸ್ವಾಮಿ ಮನವಿ ಮಾಡಿದರು.
ಇದನ್ನೂ ಓದಿ | ‘ಬಿಜೆಪಿ ನಾಯಕರ ಆಸ್ತಿ ಎಷ್ಟಿತ್ತು? ಎಷ್ಟಾಗಿದೆ? ಶಿವಮೊಗ್ಗ ನಗರದಲ್ಲಿ ಯಾರೆಲ್ಲರ ಆಸ್ತಿ ಎಷ್ಟಿದೆ?’
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















