SHIVAMOGGA LIVE NEWS | COUNTRY CLUB | 23 ಏಪ್ರಿಲ್ 2022
ಪ್ರತಿಷ್ಠಿತ ಶಿವಮೊಗ್ಗದ ಕಂಟ್ರಿ ಕ್ಲಬ್ ಆವರಣದಲ್ಲಿ ಮೇ 1ರಂದು ನೂತನ ಕ್ರೀಡಾ ಸಂಕೀರ್ಣದ ಉದ್ಘಾಟನಾ ಮಾಡಲಾಗುತ್ತದೆ ಎಂದು ಶಿವಮೊಗ್ಗ ಕಂಟ್ರಿ ಕ್ಲಬ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.
![]() |
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಎಸ್.ಅರುಣ್ ಅವರು, ಶಿವಮೊಗ್ಗ ಕಂಟ್ರಿ ಕ್ಲಬ್ ಆವರಣದಲ್ಲಿ ಅತ್ಯಾಧುನಿಕ ವ್ಯವಸ್ಥೆಯೊಂದಿಗೆ ಐದು ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ಸಂಕೀರ್ಣ ನಿರ್ಮಾಣ ಮಾಡಲಾಗಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಕ್ರೀಡಾ ಸಂಕೀರ್ಣ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
1991ರಲ್ಲಿ ತುಂಗಾ ನದಿ ತೀರದಲ್ಲಿ ಸಮಾನ ಮನಸ್ಕರು ಸೇರಿ ಮೂರುವರೆ ಎಕರೆ ಪ್ರದೇಶದಲ್ಲಿ ಕಂಟ್ರಿ ಕ್ಲಬ್ ಆರಂಭಿಸಿದರು. ಸದ್ಯ ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಕ್ಲಬ್ ಆಗಿ ರೂಪುಗೊಂಡಿದೆ. ಪ್ರಭಾವಿ ಸಂಸ್ಥೆಯಾಗಿ ಸದೃಢವಾಗಿ ರೂಪುಗೊಳ್ಳುತ್ತ ಸಾಗುತ್ತಿದೆ. ಸದ್ಯ 1200 ಸದಸ್ಯರನ್ನು ಕ್ಲಬ್ ಹೊಂದಿದೆ ಎಂದರು.
ನೂತನ ಕ್ರೀಡಾ ಸಂಕೀರ್ಣದಲ್ಲಿ ಒಳಾಂಗಣ ಶೆಟಲ್ ಕೋರ್ಟ್, ಬ್ಯಾಂಕ್ವೆಟ್ ಹಾಲ್, ಹೋಂ ಥಿಯೇಟರ್, ಅಧ್ಯಯನ ಕೊಠಡಿ, ಜಿಮ್ ಸೇರಿದಂತೆ ಉತ್ತಮ ಹಾಗೂ ಆತ್ಯಾಧುನಿಕ ಸೌಕರ್ಯದ ವ್ಯವಸ್ಥೆ ರೂಪಿಸಲಾಗಿದೆ ಎಂದು ತಿಳಿಸಿದರು.
ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ರೋಜರ್ ಬಿನ್ನಿ, ಉಪಾಧ್ಯಕ್ಷ ಜೆ.ರಘುರಾಮ್, ಸೂಡಾ ಅಧ್ಯಕ್ಷ ನಾಗರಾಜ್, ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಶಿವಮೊಗ್ಗ ಕಂಟ್ರಿ ಕ್ಲಬ್ ನೂತನ ಕ್ರೀಡಾ ಸಂಕೀರ್ಣದ ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಭೂಪಾಳಂ ಶಶಿಧರ್, ಕಾರ್ಯದರ್ಶಿ ಜಿ.ಎನ್.ಪ್ರಕಾಶ್, ಉಪಾಧ್ಯಕ್ಷ ಎಚ್.ಜಿ.ಅಶೋಕ್, ಜಂಟಿ ಕಾರ್ಯದರ್ಶಿ ಹೊಸತೋಟ ಕೆ.ಮಂಜುನಾಥ್, ಖಜಾಂಚಿ ಮದನ್ ಲಾಲ್, ನಿರ್ದೇಶಕರಾದ ಕಡಿದಾಳ್ ಸದಾನಂದ್, ಬಿ.ಆರ್.ಅಮರ್ ನಾಥ್, ಎಸ್.ಕೆ.ಕುಮಾರ್, ಎ.ಮಂಜುನಾಥ್, ಡಾ. ಎ.ಸತೀಶ್ ಕುಮಾರ್ ಶೆಟ್ಟಿ, ವಿ.ಸತೀಶ್ ಚಂದ್ರ, ಡಾ. ವೈ.ವಿ.ಶಶಿಧರ್ ಉಪಸ್ಥಿತರಿದ್ದರು.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಚಾಲನೆ, ಪರೀಕ್ಷೆ ಸಿದ್ಧತೆ ಕುರಿತು ಮಾಹಿತಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200