ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | SHIMOGA DIESEL | 26 ಏಪ್ರಿಲ್ 2022
ಟಯರ್ ಸ್ಪೋಟಗೊಂಡು ಡಿಸೇಲ್ ಸಾಗಿಸುತ್ತಿದ್ದ ಟ್ಯಾಂಕರ್ ಲಾರಿಯೊಂದು ರಸ್ತೆ ಡಿವೈಡರ್’ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ.
ಹೊಸನಗರ ತಾಲೂಕು ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಕೊಪ್ಪ ಸರ್ಕಲ್ ಬಳಿ ಘಟನೆ ಸಂಭವಿಸಿದೆ. ಮಂಗಳೂರಿನಿಂದ ಡಿಸೇಲ್ ತುಂಬಿಕೊಂಡು ಬಳ್ಳಾರಿ ಟ್ಯಾಂಕರ್ ಲಾರಿ ತೆರಳುತ್ತಿತ್ತು.
ಅಂಗಡಿಗೆ ಅಪ್ಪಳಿಸಿದ ಚಕ್ರ
ಮಾವಿನಕೊಪ್ಪ ಸರ್ಕಲ್ ಬಳಿ ಇಂದು ಬೆಳಗಿನ ಜಾವ ಟ್ಯಾಂಕರ್’ನ ಮುಂದಿನ ಟಯರ್ ಸ್ಪೋಟಗೊಂಡಿದೆ. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್’ಗೆ ಲಾರಿ ಡಿಕ್ಕಿ ಹೊಡೆದು ನಿಂತಿದೆ. ಲಾರಿ ಚಕ್ರಗಳು ಕಳಚಿಕೊಂಡು ಅಕ್ಕಪಕ್ಕದ ಅಂಗಡಿಗಳಿಗೆ ಹೋಗಿ ಅಪ್ಪಳಿಸಿವೆ. ಇದರಿಂದ ಅಂಗಡಿಗಳಿಗೆ ಹಾನಿ ಉಂಟಾಗಿದೆ.
ಲಾರಿ ಡಿಸೇಲ್ ಟ್ಯಾಂಕ್’ನಲ್ಲಿದ್ದ ಡಿಸೇಲ್ ಸೋರಿಯಾಗಿದೆ. ಆದರೆ ಟ್ಯಾಂಕರ್’ನಲ್ಲಿದ್ದ ಡಿಸೇಲ್’ಗೆ ಯಾವುದೆ ತೊಂದರೆ ಆಗಿಲ್ಲ ಎಂದು ತಿಳಿದು ಬಂದಿದೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಗಾಂಜಾ ಅಮಲಿನಲ್ಲಿದ್ದರ ವಿಚಾರಣೆ ವೇಳೆ ದೊಡ್ಡ ಸಂಚು ಬಯಲು, ಏನದು ಪ್ಲಾನ್?

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















