ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | GANJA| 28 ಏಪ್ರಿಲ್ 2022
ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷಗೆ ಒಳಪಡಿಸಿದ್ದಾರೆ. ಗಾಂಜಾ ಸೇವನೆ ದೃಢವಾದ ಹಿನ್ನೆಲೆ ಮೂವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಭರ್ಮಪ್ಪ ನಗರದ ಮೊಹಮದ್ ಹ್ಯಾರಿಸ್, ಕ್ಲಾರ್ಕ್ ಪೇಟೆಯ ಮೊಹಮದ್ ಫೈಸಲ್, ಎಂಕೆಕೆ ರಸ್ತೆಯ ಸುಹೇಲ್ ಬಂಧಿತರು. ಗಾಂಜಾ ಸೇವನೆ ಮಾಡಿರುವುದು ದೃಢವಾದ ಹಿನ್ನೆಲೆ ಮೂವರನ್ನು ಬಂಧಿಸಲಾಗಿದೆ.
ಸೀಗೆಹಟ್ಟಿ ಭಾಗದಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದ ಸಂದರ್ಭ ಈ ಮೂವರು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದರು. ಇವರನ್ನು ವಶಕ್ಕೆ ಪಡೆದು ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಮೂವರು ಗಾಂಜಾ ಸೇವನೆ ಮಾಡಿರುವುದು ದೃಢವಾದ ಹಿನ್ನೆಲೆ, ಪ್ರಕರಣ ದಾಖಲು ಮಾಡಲಾಗಿದೆ.
ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ಗಾಂಧಿ ಬಜಾರ್’ಗೆ ಹೋಗುತ್ತಿದ್ದ ಯುವಕನ ಮೇಲೆ ಬೈಕಲ್ಲಿ ಅಡ್ಡಾದಿಡ್ಡಿ ಬಂದವರಿಂದ ಹಲ್ಲೆ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422