ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | SHIMOGA TOUR | 29 ಏಪ್ರಿಲ್ 2022
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೂರು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಇವತ್ತು ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಆಗಮಿಸಿರುವ ಯಡಿಯೂರಪ್ಪ ಅವರು ಶಿವಮೊಗ್ಗ ಮತ್ತು ಶಿಕಾರಿಪುರದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಯಾವೆಲ್ಲ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ?
ಏಪ್ರಿಲ್ 30ರಂದು ಬೆಳಗ್ಗೆ 10.30ಕ್ಕೆ ಶಿವಮೊಗ್ಗ ನಗರದಲ್ಲಿ ಖಾಸಗಿ ಆಸ್ಪತ್ರೆಯೊಂದರ ಉದ್ಘಾಟನೆ ಮಾಡಲಿದ್ದಾರೆ. ಸಂಜೆ ಶಿಕಾರಿಪುರಕ್ಕೆ ತೆರಳಲಿದ್ದಾರೆ.
ಮೇ 1ರಂದು ಬೆಳಗ್ಗೆ 10.30ಕ್ಕೆ ಶಿಕಾರಿಪುರದ ಉಡುಗಣಿಗೆ ತೆರಳಲಿದ್ದಾರೆ. ಅಲ್ಲಿ ಶ್ರೀ ಗುರುರಾಜ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಶ್ರೀ ಚನ್ನಕೇಶವ ದೇವರು, ಶ್ರೀಮುಖ್ಯ ಪ್ರಾಣದೇವರು ಹಾಗೂ ಶ್ರೀ ರಾಘವೇಂದ್ರ ಸ್ವಾಮಿ ಅವರ ದ್ವಿತೀಯ ವೃತ್ತಿಕಾ ಬೃಂದಾವನ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಶಿಕಾರಿಪುದಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮೇ 2ರಂದು ಬೆಳಗ್ಗೆ ಶಿಕಾರಿಪುರದಲ್ಲಿ 250 ಹಾಸಿಗೆ ಸಾಮರ್ಥ್ಯದ ಸಾರ್ವಜನಿಕ ಆಸ್ಪತ್ರೆ ಕಟ್ಟಡ, ಶಿರಾಳಕೊಪ್ಪದ 50 ಹಾಸಿಗೆಯ ಸಾರ್ವಜನಿಕ ಆಸ್ಪತ್ರೆ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 4 ಗಂಟೆಗೆ ಶಿವಮೊಗ್ಗದ ಸಿಮ್ಸ್ ಮೆಡಿಕಲ್ ಕಾಲೇಜಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ ಶಿವಮೊಗ್ಗದಲ್ಲಿಯೆ ಯಡಿಯೂರಪ್ಪ ಅವರು ವಾಸ್ತವ್ಯ ಮಾಡಲಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗಕ್ಕೆ ಯಡಿಯೂರಪ್ಪ ಆಗಮನ, ಭದ್ರಾವತಿಯಲ್ಲಿ ಗೆಲುವು ಸಾಧಿಸಲು ವಿಶೇಷ ಪ್ರಯತ್ನದ ಸುಳಿವು
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






