ಆಯನೂರು ಸಮೀಪ ಅಪಘಾತ, ಬೈಕ್ ಸವಾರ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | ACCIDENT| 29 ಏಪ್ರಿಲ್ 2022

ಆಯನೂರು ಸಮೀಪ ಪಿಕಪ್ ವಾಹನ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾನೆ.

ವಿಠಗೊಂಡನಕೊಪ್ಪ ಗ್ರಾಮದ ಆಕಾಶ್ (20) ಮೃತ ದುರ್ದೈವಿ. ಆಯನೂರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ.

ಆಕಾಶ್ ಬೈಕಿನಲ್ಲಿ ಶಿವಮೊಗ್ಗದಿಂದ ಆಯನೂರು ಕಡೆಗೆ ತೆರಳುತ್ತಿದ್ದ. ಕೋಳಿ ಸಾಗಣೆಯ ಪಿಕಪ್ ವಾಹನವು ಆಯನೂರು ಕಡೆಯಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿತ್ತು. ವೀರಗಾರನ ಬೈರನಕೊಪ್ಪದ ಬಳಿ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಆಕಾಶ್ ತಲೆ, ಕಾಲು ಭಾಗಕ್ಕೆ ಗಂಭೀರ ಪೆಟ್ಟು ಬಿದ್ದಿದೆ. ಆತ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಕುಂಸಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ – ಬೈಕ್ ಸವಾರನ ಪ್ರಾಣಕ್ಕೆ ಕುತ್ತು ತಂದ ಟಿಪ್ಪರ್ ಲಾರಿ

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment