ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | HOME MINISTER | 07 ಮೇ 2022
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇತ್ತು ಮತ್ತೂರು ಗ್ರಾಮಕ್ಕೆ ಭೇಟಿ ನೀಡಿದ್ದರು. ಕಳೆದ ಸೂಳೆಬೈಲಿನಲ್ಲಿ ಕಾರು ಗಾಜು ಒಡೆದು ಪ್ರಕರಣ ಸಂಬಂಧ ಸ್ಥಳೀಯರಿಂದ ಮಾಹಿತಿ ಪಡೆದರು. ಮತ್ತೂರಿನ ಪ್ರಮುಖರೊಂದಿಗೆ ಗೃಹ ಸಚಿವರು ಚರ್ಚೆ ನಡೆಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಮಚ್ಚು ಲಾಂಗು ಹಿಡಿದು ಒಂದು ಕಾರಿನ ಮೇಲೆ ದಾಳಿ ಮಾಡಿದ್ದಾರೆ. ಮಾಹಿತಿ ಗೊತ್ತಾದ ಅರ್ಧ ಗಂಟೆಯೊಳಗೆ ಪೊಲೀಸರು ಅಪರಾಧಿಗಳನ್ನು ಬಂಧಿಸಿದ್ದಾರೆ.
ಹರ್ಷ ಕೊಲೆ ಬಳಿಕ ಒಂದಿಲ್ಲೊಂದು ದಾಳಿ
ಹರ್ಷನ ಕೊಲೆ ಬಳಿಕ ವಾರಕ್ಕೆ ಒಂದೆರಡು ಘಟನೆಗಳು ನಡೆಯುತ್ತಿವೆ. ಕುಡಿತ ಮತ್ತು ಗಾಂಜಾ ಅಮಲಿನಲ್ಲಿ ಇಂತಹ ಕೃತ್ಯ ಎಸಗುತ್ತಿದ್ದಾರೆ. ಎಲ್ಲಕ್ಕಿಂತಲೂ ಮುಖ್ಯವಾಗಿ ಮತಾಂಧತೆ ಹಿನ್ನೆಲೆಯಲ್ಲಿ ಈ ರೀತಿ ಮಾಡುತ್ತಿದ್ದಾರೆ. ಯಾವೆಲ್ಲ ಕಾನೂನು ಕ್ರಮ ಕೈಗೊಳ್ಳಬೇಕೋ ಅದನ್ನು ಪೊಲೀಸರು ಕೈಗೊಂಡಿದ್ದಾರೆ. ನಾನು ಕೂಡ ವರದಿ ತೆಗೆದುಕೊಂಡಿದ್ದೇನೆ ಎಂದು ಆರಗ ಜ್ಞಾನೇಂದ್ರ ತಿಳಿಸಿದರು.
ಇನ್ನು, ಶಿವಮೊಗ್ಗ ಪೊಲೀಸ್ ವ್ಯವಸ್ಥೆಯಲ್ಲಿ ಒಂದಷ್ಟು ಬದಲಾವಣೆ ಮಾಡಿದ್ದೇವೆ. ಈಗ ಇರುವ ಸಿಬ್ಬಂದಿಗಳು ತುರ್ತು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದರು.
ಇದನ್ನೂ ಓದಿ – ಕಲ್ಲು ಬಿದ್ದ ಕಾರಿನಲ್ಲಿ ಬಿಜೆಪಿ ಮುಖಂಡ ಹರಿಕೃಷ್ಣ ಇದ್ದರಾ? | 5 ಪಾಯಿಂಟ್ ನ್ಯೂಸ್