SHIVAMOGGA LIVE NEWS | CANDIDATE | 10 ಮೇ 2022
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಸಂಸದ ಕೆ.ಜಿ.ಶಿವಪ್ಪ ಅವರ ಪುತ್ರ, ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಜಿ.ಪ್ರಶಾಂತ್ ಹೇಳಿದರು.
ಜೋಸೆಫ್ ನಗರದ ನಿವಾಸಕ್ಕೆ ಭೇಟಿ ನೀಡಿದ್ದ ಸಾರಗನಜಡ್ಡು ಶ್ರೀ ಕಾರ್ತಿಕೇಯ ಪೀಠದ ಯೋಗೇಂದ್ರ ಶ್ರೀಗಳನ್ನು ಸನ್ಮಾನಿಸಿ ಮಾತನಾಡಿದ ಪ್ರಶಾಂತ್ ಅವರು, ಅನೇಕ ಸಾಮಾಜಿಕ ಕೆಲಸಗಳಲ್ಲಿ ನಾನು ತೊಡಗಿಸಿಕೊಂಡಿದ್ದೇನೆ. ರಾಜಕೀಯ ಸ್ಥಾನಮಾನ ಸಿಕ್ಕರೆ ಇನ್ನಷ್ಟು ಪರಿಣಾಮಕಾರಿಯಾಗಿ ಜನರ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದರು.
ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ನಮ್ಮ ತಂದೆ ಸಂಸದರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಇದೀಗ ನಮ್ಮ ಮನೆಗೆ ಶ್ರೀಗಳು ಭೇಟಿ ನೀಡಿದ್ದು ನನ್ನ ರಾಜಕೀಯ ಇಚ್ಛಾಶಕ್ತಿಗೆ ಬಲ ಬಂದಂತಾಗಿದೆ ಎಂದರು.
ಕೆ.ಜಿ.ಪ್ರಶಾಂತ್ ಅವರ ಕುಟುಂಬದವರು ಈ ವೇಳೆ ಉಪಸ್ಥಿತರಿದ್ದರು.
ಇದನ್ನೂ ಓದಿ – ಶಿವಮೊಗ್ಗ ನಗರದಲ್ಲಿ ಇವತ್ತು ಜನದನಿ ರಾಲಿ, ಭಾಗವಹಿಸಲಿದ್ದಾರೆ ಡಿಕೆಶಿ
- ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?
- ಅಡಿಕೆ ಧಾರಣೆ | 20 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
- ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?
- ಶಿವಮೊಗ್ಗ ಜಿಲ್ಲೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು