ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | TRAFFIC | 10 ಮೇ 2022
ಬಿಜೆಪಿ ಸರ್ಕಾರದ ದುರಾಡಳಿತ ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಶಿವಮೊಗ್ಗದಲ್ಲಿ ಇವತ್ತು ಜನಧ್ವನಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ನಗರ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿತು. ಹಾಗಾಗಿ ರಸ್ತೆಯನ್ನು ಬಂದ್ ಮಾಡಲಾಗಿತ್ತು. ಇದರಿಂದಾಗಿ ಶಿವಮೊಗ್ಗ ನಗರದಲ್ಲಿ ಇವತ್ತು ಜನರು ಟ್ರಾಫಿಕ್ ಸಮಸ್ಯೆ ಅನುಭವಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಅಶೋಕ ಸರ್ಕಲ್’ನಿಂದ ಅಮೀರ್ ಅಹಮದ್ ಸರ್ಕಲ್, ನೆಹರೂ ರಸ್ತೆ, ಗೋಪಿ ಸರ್ಕಲ್, ಬಾಲರಾಜ ಅರಸ್ ರಸ್ತೆವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಿತು. ಮಧ್ಯಾಹ್ನದ ವೇಳೆಗೆ ಬಾಲರಾಜ ಅರಸ್ ರಸ್ತೆಯ ಭೋವಿ ಸಮುದಾಯ ಭವನದ ಮುಂದೆ ಸಮಾವೇಶ ನಡೆಸಲಾಯಿತು.
ಸಿಟಿಯಲ್ಲಿ ಟ್ರಾಫಿಕ್ ಜಾಮ್
ಬೆಳಗ್ಗೆಯಿಂದಲೇ ಅಶೋಕ ಸರ್ಕಲ್ ಬಳಿ ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಮಾವಣೆಯಾಗಿದ್ದರು. ಇದರಿಂದ ಈ ಭಾಗದಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಇನ್ನು, ಪ್ರತಿಭಟನಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರದ ಮಾರ್ಗ ಬದಲಾಯಿಸಲಾಗಿತ್ತು. ಹಾಗಾಗಿ ವಾಹನ ಸವರರು ಸುತ್ತಿ ಬಳಸಿ ಓಡಾಡಬೇಕಾಯಿತು.
ಬಿ.ಹೆಚ್.ರಸ್ತೆ, ನೆಹರೂ ರಸ್ತೆ, ಕುವೆಂಪು ರಸ್ತೆ ಸಾಗರ ರಸ್ತೆಯಲ್ಲಿ ಮೆರವಣಿಗೆ ಮತ್ತು ಪ್ರತಿಭಟನಾ ಸಮಾವೇಶದ ವೇಳೆ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ, ಹೇಗಿತ್ತು ಮೆರವಣಿಗೆ?