BREAKING | ಮಹತ್ವದ ಬೆಳವಣಿಗೆಯಲ್ಲಿ ದೆಹಲಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ

SHIVAMOGGA LIVE NEWS | DELHI | 11 ಮೇ 2022

ರಾಜ್ಯ ರಾಜಕಾರಣ ದೆಹಲಿ ಅಂಗಳಕ್ಕೆ ಶಿಫ್ಟ್ ಆಗಿದೆ. ಮಹತ್ವದ ಬೆಳವಣಿಗೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ದೆಹಲಿಗೆ ತೆರಳಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇವತ್ತು ದಿಢೀರ್ ದೆಹಲಿಗೆ ತೆರಳಿದ್ದಾರೆ. ಸಂಜೆ ವೇಳೆಗೆ ಆರಗ ಜ್ಞಾನೇಂದ್ರ ಅವರು ದೆಹಲಿಗೆ ವಿಮಾನ  ಹತ್ತಿದ್ದಾರೆ. ಹೈಕಮಾಂಡ್ ಬುಲಾವ್ ಮೇರೆಗೆ ಆರಗ ಜ್ಞಾನೇಂದ್ರ ಅವರು ದೆಹಲಿಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

Shimoga Nanjappa Hospital

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ದೆಹಲಿಯಲ್ಲಿದ್ದಾರೆ. ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಚರ್ಚೆಸುತ್ತಿದ್ದಾರೆ. ಸಂಪುಟ ವಿಸ್ತರಣೆ ಕುರಿತು ಮಹತ್ವದ ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಆರಗ ಜ್ಞಾನೇಂದ್ರ ಅವರು ದೆಹಲಿಗೆ ತೆರಳಿರುವುದು ರಾಜ್ಯ ಮತ್ತು ಜಿಲ್ಲೆಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Kalleshwara-Enterprises.webp

ಇದನ್ನೂ ಓದಿ – ಮಾಜಿ ಸಚಿವ ಕಿಮ್ಮನೆ ರತ್ನಾಕರ್’ಗೆ ಮಾಜಿ ಸಿಎಂ ಸಿದ್ದರಾಮಯ್ಯ ಫೋನ್ ಕರೆ

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment